newsics.com
ನವದೆಹಲಿ: ಡಾರ್ಬದ ಚವಸ್ಪ್ರಾಶ್ ವಿರುದ್ಧ ಬಾಬಾ ರಾಮ್‌ದೇವ್ ಅವರ ಪತಂಜಲಿ ಆಯುರ್ವೇದವು ಯಾವುದೇ ದಾರಿತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ದೆಹಲಿ ಹೈಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ನಿರ್ಬಂಧಿಸಿದೆ.
ಪತಂಜಲಿ ಸಂಸ್ಥೆ ತನ್ನ ವಿರುದ್ಧ ನೀಡುತ್ತಿರುವ ಅವಹೇಳನಕಾರಿ ಜಾಹೀರಾತುಗಳ ಪ್ರಸಾರಕ್ಕೆ ತಡೆ ನೀಡುವಂತೆ ಕೋರಿ ಡಾಬರ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರು, ಪತಂಜಲಿ ಸಂಸ್ಥೆಗೆ ಡಾಬರ್ ವಿರುದ್ಧ ಅವಹೇಳನಕಾರಿ ಜಾಹೀರಾತು ನೀಡದಂತೆ ನಿರ್ಬಂಧ ವಿಧಿಸಿದೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 14ಕಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.