Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Weather info ವಾಯುಭಾರ ಕುಸಿತ: ಮುಂದಿನ 7 ದಿನ ರಾಜ್ಯಾದ್ಯಂತ ಗಾಳಿಸಹಿತ ಭಾರೀ ಮಳೆ ಸಾಧ್ಯತೆ
ಕರ್ನಾಟಕಪ್ರಮುಖ

Weather info ವಾಯುಭಾರ ಕುಸಿತ: ಮುಂದಿನ 7 ದಿನ ರಾಜ್ಯಾದ್ಯಂತ ಗಾಳಿಸಹಿತ ಭಾರೀ ಮಳೆ ಸಾಧ್ಯತೆ

Share
2 Min Read
SHARE

newsics.com

ಬೆಂಗಳೂರು: ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರ ರಾಜ್ಯಾದ್ಯಂತ ಗಾಳಿಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಮುಂದಿನ ಏಳು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯವ ಸಾಧ್ಯತೆಯಿದ್ದು, ಎಚ್ಚರ ವಹಿಸುವಂತೆ ಸೂಚಿಸಿದೆ.

ಮಧ್ಯ ಮತ್ತು ಪೂರ್ವ ಭಾರತದ ಮೂಲಕ ಹಾದುಹೋಗುವ ಮಾನ್ಸೂನ್ ವಾಯುಭಾರ ಕುಸಿತ ಹಾಗೂ ಮಹಾರಾಷ್ಟ್ರ-ಕರ್ನಾಟಕ ಕರಾವಳಿಯುದ್ದಕ್ಕೂ ವಿಸ್ತರಿಸಿರುವ ಕಡಲಾಚೆಯ ವಾಯುಭಾರ ಕುಸಿತದಿಂದಾಗಿ ಹವಾಮಾನದ ಸ್ವರೂಪ ಬದಲಾಗುತ್ತಿದೆ ಎಂದು ಐಎಂಡಿ ತಿಳಿಸಿದೆ.

ದೈನಂದಿನ ಹವಾಮಾನ ವರದಿಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ. ಮುಂದಿನ ಎರಡು ದಿನ ಕರಾವಳಿಯಲ್ಲಿ ಇದೇ ಪರಿಸ್ಥಿತಿ ಮುಂದುವರಿಯುವ ನಿರೀಕ್ಷೆಯಿದೆ. ಬಳಿಕ ಹಗುರದಿಂದ ಮಧ್ಯಮ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.

ಕರ್ನಾಟಕದ ಉತ್ತರ ಒಳನಾಡು ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಜುಲೈ 4ರಂದು ಗಂಟೆಗೆ 40-50 ಕಿ.ಮೀ. ಗಾಳಿ ಬೀಸಲಿದೆ.

ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಗಳಲ್ಲಿ ಭಾರೀ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 4 ರಂದು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಮತ್ತಿತರ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗಲಿದೆ.

ಮೋಡ ಕವಿದ ವಾತಾವರಣ:

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಮುಂದಿನ 48 ಗಂಟೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

School Holiday ಭಾರೀ ಮಳೆ ಹಿನ್ನೆಲೆ: ಶುಕ್ರವಾರ ಈ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ

ಅಕ್ರಮ ಆಸ್ತಿ ಗಳಿಕೆ ಆರೋಪ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ FIR ದಾಖಲು

Microplastics detected in human reproductive fluids ಮಾನವ ವೀರ್ಯ, ಅಂಡಾಣು ದ್ರವದಲ್ಲಿ ಮೈಕ್ರೋಪ್ಲಾಸ್ಟಿಕ್‌ ಪತ್ತೆ!

Jacqueline Fernandez 200 ಕೋಟಿ ಅಕ್ರಮ ವರ್ಗಾವಣೆ ಪ್ರಕರಣ : ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌

TAGGED:Air pressure drop: Windyheavy rain likely across the state for the next seven days
Share This Article
Facebook Twitter Copy Link Print
Previous Article ಅಕ್ರಮ ಆಸ್ತಿ ಗಳಿಕೆ ಆರೋಪ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ FIR ದಾಖಲು
Next Article minor boy dies ಮನೆಯಲ್ಲೇ ಜೀವ ಕಳೆದುಕೊಂಡ ಅಪ್ರಾಪ್ತ ಬಾಲಕ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?