newsics.com
ಕೊಡಗು: ಅಪ್ರಾಪ್ತ ಬಾಲಕನೊಬ್ಬ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿ ನಡೆದಿದೆ.
ಪಾಲಿಬೆಟ್ಟ ನಿವಾಸಿ ಪ್ರದೀಪ್ ಕುಮಾರ್ ಹಾಗೂ ಕವಿರತ್ನ ದಂಪತಿಯ ಪುತ್ರ ಮಿಥುನ್ (14) ಎಂಬಾತನೇ ಮೃತ ಬಾಲಕ.
ಮೃತ ಮಿಥುನ್ ಅಮ್ಮತ್ತಿ ನೇತಾಜಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ. ತೀವ್ರ ಮಳೆ ಇದ್ದ ಹಿನ್ನೆಲೆಯಲ್ಲಿ ಗುರುವಾರ ಶಾಲೆಗೆ ರಜೆ ಇತ್ತು. ಹೀಗಾಗಿ ವಿದ್ಯಾರ್ಥಿ ಮಿಥುನ್ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿರಾಜಪೇಟೆ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಾಲಕನ ಆತ್ಮಹತ್ಯೆಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ.
Weather info ವಾಯುಭಾರ ಕುಸಿತ: ಮುಂದಿನ 7 ದಿನ ರಾಜ್ಯಾದ್ಯಂತ ಗಾಳಿಸಹಿತ ಭಾರೀ ಮಳೆ ಸಾಧ್ಯತೆ