newsics.com
ಬೆಂಗಳೂರು: ಕೋಟ್ಯಾಂತರ ರೂಪಾಯಿ ಚೀಟಿ ಹಣ ಕಟ್ಟಿಸಿಕೊಂಡು ದಂಪತಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಜರಗನಹಳ್ಳಿಯಲ್ಲಿ ನಡೆದಿದೆ. ಆರೋಪಿಗಳಾದ ಸುಧಾ ಮತ್ತು ಸಿದ್ದಿಚಾರಿ ಸುಮಾರು 40 ಕೋಟಿ ರೂ. ಚೀಟಿ ಹಣ ಕಟ್ಟಿಸಿಕೊಂಡು ಪರಾರಿಯಾಗಿ ಒಂದು ತಿಂಗಳು ಕಳೆದಿದೆ.
ಏನಿದು ಪ್ರಕರಣ?
ಜರಗನಹಳ್ಳಿಯಲ್ಲಿ ವಾಸವಾಗಿದ್ದ ಸುಧಾ ಎಂಬುವರ ಕುಟುಂಬ ಕಳೆದ 20 ವರ್ಷದಿಂದ ಚೀಟಿ ಹಣ ನಡೆಸುತ್ತಿದೆ. ಈ ಕುಟುಂಬ ಸುಮಾರು 600ಕ್ಕೂ ಹೆಚ್ಚು ಜನರಿಂದ ಚೀಟಿ ಹಣ ಕಟ್ಟಿಸಿಕೊಂಡಿದೆ. ಸಾರ್ವಜನಿಕರು 5 ರಿಂದ 10 ಲಕ್ಷ ರೂ.ವರೆಗೂ ಚೀಟಿ ಹಣ ಕಟ್ಟಿದ್ದಾರೆ. ಆದರೆ, ಸುಧಾ ಮತ್ತು ಆಕೆಯ ಪತಿ ಸಿದ್ದಾಚಾರಿ ಕಳೆದ ಒಂದು ವರ್ಷದಿಂದ ಚೀಟಿ ಹಣ ನೀಡದೆ ಸತಾಯಿಸುತ್ತಿದ್ದರು. ಈ ನಡುವೆ ಸುಧಾ ಮತ್ತು ಸಿದ್ದಾಚಾರಿ ದಂಪತಿ ತಮ್ಮ ಇಬ್ಬರು ಮಕ್ಕಳ ಸಮೇತ ಜೂನ್ 3ರ ಮಧ್ಯರಾತ್ರಿ ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಿದ್ದಾರೆ.
ಪುಟ್ಟೇನಹಳ್ಳಿ ಠಾಣೆ ಪೊಲೀಸರು ಮೂರು ತಂಡಗಳಾಗಿ ಆರೋಪಿಗಳಾದ ಸುಧಾ ಮತ್ತು ಸಿದ್ದಾಚಾರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.