Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲೂ ಹಣ ಅಕ್ರಮ ವರ್ಗಾವಣೆ: ಬಾಗಲಕೋಟೆ ಠಾಣೆಯಲ್ಲಿ ಎಫ್ಐಆರ್
ಕರ್ನಾಟಕಪ್ರಮುಖ

ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲೂ ಹಣ ಅಕ್ರಮ ವರ್ಗಾವಣೆ: ಬಾಗಲಕೋಟೆ ಠಾಣೆಯಲ್ಲಿ ಎಫ್ಐಆರ್

Share
1 Min Read
SHARE

newsics.com

ಬಾಗಲಕೋಟೆ: ವಾಲ್ಮೀಕಿ ನಿಗಮ ಹಗರಣ, ಮುಡಾ‌ ಅಕ್ರಮ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್‌ ಖಾತೆಯಲ್ಲಿದ್ದ ₹2.47 ಕೋಟಿಗೂ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಅಧಿಕಾರಿಗಳ ಗಮನಕ್ಕೆ ಬಾರದೆ ಈ ಹಣದ ವರ್ಗಾವಣೆ ಆಗಿದೆ ಎಂದು ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಅಕ್ರಮವಾಗಿ ಹಣ ವರ್ಗಾವಣೆಯಾಗಿರುವ ಮಾಹಿತಿ ಬೆಳಕಿಗೆ ಬರುತ್ತಲೇ ಬಾಗಲಕೋಟೆಯ ಐಡಿಬಿಐ ಬ್ಯಾಂಕ್‌(IDBI) ಮ್ಯಾನೇಜರ್ ಮತ್ತು ಸಿಬ್ಬಂದಿ ವಿರುದ್ಧ ಪ್ರವಾಸೋದ್ಯಮ ಇಲಾಖೆ(Karnataka Department of Tourism) ಅಧಿಕಾರಿ ಗೋಪಾಲ ಹಿತ್ತಲಮನಿ ಅವರು ಜು.11ರಂದು ದೂರು ದಾಖಲಿಸಿದ್ದು, ತನಿಖೆ ಆರಂಭವಾಗಿದೆ.

ಅಕ್ಟೋಬರ್‌ 28, 2021ರಿಂದ ಫೆ.22, 2024ರ ನಡುವೆ 21 ಬಾರಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.

ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರ ಹೆಸರಲ್ಲಿ ನಗರದ ಐಡಿಬಿಐ ಬ್ಯಾಂಕ್‌ ಶಾಖೆಯಲ್ಲಿರುವ ಮೂರು ಖಾತೆಗಳಲ್ಲಿ ಈ ಅಕ್ರಮ ನಡೆದಿದೆ. ಮೂರು ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ಅಧಿಕಾರಿಗಳ ಗಮನಕ್ಕೆ ಬಾರದೆ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ದೂರಲಾಗಿದೆ.

ಪ್ರವಾಸೋದ್ಯಮದ ಇಲಾಖೆ ಅಧಿಕಾರಿಯೊಬ್ಬರು ಜುಲೈ ಮೊದಲ ವಾರ ಐಡಿಬಿಐ ಬ್ಯಾಂಕ್‌ಗೆ ಹೋಗಿ ಸ್ಟೇಟ್‌ಮೆಂಟ್‌ ತಂದಾಗ ₹1.63 ಕೋಟಿ ಹಣ ಇತ್ತು. ಅನುಮಾನಗೊಂಡು ಬ್ಯಾಂಕ್‌ಗೆ ಇಲಾಖೆಯಿಂದ ಹಾಕಿರುವ ಚೆಕ್‌ಗಳನ್ನೆಲ್ಲ ಪರಿಶೀಲಿಸಿದಾಗ ವ್ಯತ್ಯಾಸ ಗಮನಕ್ಕೆ ಬಂದಿದೆ. ಅದರಂತೆ ಮೂರು ದಿನಗಳ ಹಿಂದೆ ಬ್ಯಾಂಕ್‌ಗೆ ಹೋಗಿ ಸ್ಟೇಟ್‌ಮೆಂಟ್‌ ತೆಗೆಸಿದಾಗ ಬ್ಯಾಂಕ್‌ ಅಕೌಂಟ್‌ನಲ್ಲಿ ಕೇವಲ ₹2,915 ಇರುವುದು ಪತ್ತೆಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಎಸ್ಪಿ ಅಮರನಾಥ ರೆಡ್ಡಿ, ಪ್ರಕರಣವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ತೆಗೆದುಕೊಂಡಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ಜತೆ ಸಭೆ ಮಾಡಲಾಗಿದೆ. ಬ್ಯಾಂಕ್‌ ಅಧಿಕಾರಿಗಳನ್ನು ಕರೆದು ಮಾತನಾಡಿದ್ದು, ತನಿಖೆಯಲ್ಲಿ ಎಲ್ಲವೂ ಬಯಲಾಗಲಿದೆ ಎಂದು ತಿಳಿಸಿದರು.

ಕಳೆದ ಮೂರು ವರ್ಷಗಳಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾಗುತ್ತಿದ್ದರೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಈ ಕುರಿತು ಯಾವುದೇ ಪರಿಶೀಲನೆ ನಡೆಸದೇ ಹೋಗಿದ್ದು ಅಚ್ಚರಿಗೆ ಕಾರಣವಾಗಿದೆ.

TAGGED:Illegal transfer money state tourism department FIR in Bagalkote station newsics ಪ್ರವಾಸೋದ್ಯಮ ಇಲಾಖೆ ಬಾಗಲಕೋಟೆ ಹಣ ಅಕ್ರಮ ವರ್ಗಾವಣೆ
Share This Article
Facebook Twitter Copy Link Print
Previous Article ರಾಜ್ಯದ ಹಲವೆಡೆ ಭಾರೀ‌ ಮಳೆ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಅಲ್ಲಲ್ಲಿ ಶಾಲೆಗಳಿಗೆ ರಜೆ ಘೋಷಣೆ
Next Article ಚಹಾದಲ್ಲೂ ಹಾನಿಕಾರಕ ಅಂಶ ಪತ್ತೆ: ಟೀ ತೋಟಗಳಲ್ಲೇ ಕೀಟನಾಶಕ, ಬಣ್ಣ ಬಳಕೆ, ನಿಷೇಧಕ್ಕೆ ಸರ್ಕಾರ ಚಿಂತನೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?