newsics.com
ಕಲಬುರಗಿ : ಸಿನಿಮಾ ಸ್ಟೈಲಲ್ಲಿ ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿ ಬರೋಬ್ಬರಿ 3 ಕೆಜಿ ಚಿನ್ನಾಭರಣ ಲೂಟಿ ಮಾಡಿ ಕಳ್ಳರು ಎಸ್ಕೇಪ್ ಆಗಿದ್ದಾರೆ.
ನಗರದ ಸರಾಫ್ ಬಜಾರ್ ನಲ್ಲಿ ಹಾಡಹಗಲೇ ರಾಬರಿ ನಡೆದಿದೆ. ಮಾಸ್ಕ್ ಧರಿಸಿಕೊಂಡು ಗನ್ ಹಿಡಿದು ಏಕಾಏಕಿ ಅಂಗಡಿಗೆ ನುಗ್ಗಿದ ನಾಲ್ವರನ್ನೊಳಗೊಂಡ ಗ್ಯಾಂಗ್ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ ಮಾಡಿ ಎಸ್ಕೇಪ್ ಆಗಿದೆ.
ಮಾಸ್ಕ್ ಧರಿಸಿ ಬಂದು ಕೃತ್ಯ ಎಸಗಿದ್ದು, 2-3 ಕೆಜಿ ಚಿನ್ನ ದರೋಡೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಕಲಬುರಗಿ ಪೊಲೀಸ್ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.