Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸದ್ಯಕ್ಕೆ ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ: ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕಪ್ರಮುಖ

ಸದ್ಯಕ್ಕೆ ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

Share
1 Min Read
SHARE

newsics.com

ಬೆಂಗಳೂರು: ಪೆಟ್ರೋಲ್, ಹಾಲಿನ ದರ ಏರಿಕೆ ಬೆನ್ನಲ್ಲೇ ಸಾಮಾನ್ಯ ಜನರು ಪ್ರಯಾಣಿಸುವ ಬಸ್ ಟಿಕೆಟ್‌ ದರ ಏರಿಕೆಯಾಗುತ್ತದೆ ಎಂಬ ಸುದ್ದಿಯಿತ್ತು. ಅದಕ್ಕೆ ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆಯಿಲ್ಲ ಎಂದಿದ್ದಾರೆ.

ವಿಧಾನಸೌಧದಲ್ಲಿ ಇಂದು ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ತಿಳಿಸಿದರು.

ನಿನ್ನೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ್ದ ರಾಜು ಕಾಗೆ ಮತ್ತು ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಶ್ರೀನಿವಾಸ್‌ ಅವರು ದರ ಏರಿಕೆಯ ಬಗ್ಗೆ ಮಾತನಾಡಿದ್ದರು.

ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಡೀಸೆಲ್ ಹಾಗೂ ಬಸ್ ಬಿಡಿ ಭಾಗಗಳ ದರ ಕೂಡ ಹೆಚ್ಚಾಗಿದೆ. ಕಳೆದ 10 ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಶಕ್ತಿ ಯೋಜನೆಯಿಂದ ನಾವು ನಷ್ಟದಲ್ಲಿದ್ದೇವೆ. ಆದರೂ ನಾವು ನಡೆಸಿಕೊಂಡು ಹೋಗುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದರು.

ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್‌ ದರ ಏರಿಸದೇ ಇದ್ದರೆ ಕೆಎಸ್‌ಆರ್‌ಟಿಸಿ ಸಂಸ್ಥೆ ಉಳಿಯುವುದಿಲ್ಲ. ಸದ್ಯದಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು. ಮೊನ್ನೆ ನಿಗಮದ ಮೀಟಿಂಗ್ ಮುಗಿದಿದ್ದು ಶೇಕಡಾ 15ರಿಂದ 20 ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಟ್ಟಿದ್ದೇವೆ ಎಂದು ಹೇಳಿದ್ದರು.

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಆಗಸ್ಟ್ 1ರಿಂದ ಏಳನೇ ವೇತನ ಆಯೋಗ ವರದಿ ಶಿಫಾರಸು ಜಾರಿ

ಸೀರೆಯಲ್ಲಿ ಕಾಣಿಸಿಕೊಂಡ ರಶ್ಮಿಕಾ ಬೈಸೆಪ್ಸ್ ಕಂಡು ದಂಗಾದ ಫ್ಯಾನ್ಸ್ 

ಭಾರೀ ಮಳೆ: ಕರ್ನಾಟಕದ 6 ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ಜೈಲಿನಲ್ಲಿರುವ ದರ್ಶನ್ ನೋಡಲು ಅತ್ತಿಗೆ ಜೊತೆ ಬಂದ ದಿನಕರ್ ತೂಗುದೀಪ

ಗಿಲ್ಲಿ ಸಿನಿಮಾ ನಟಿ ರಕುಲ್ ಪ್ರೀತ್ ಸಿಂಗ್ ಸಹೋದರ ಅಮನ್‌ ಅರೆಸ್ಟ್

TAGGED:No hike in bus fare for now: Minister Ramalingareddy
Share This Article
Facebook Twitter Copy Link Print
Previous Article ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಆಗಸ್ಟ್ 1ರಿಂದ ಏಳನೇ ವೇತನ ಆಯೋಗ ವರದಿ ಶಿಫಾರಸು ಜಾರಿ
Next Article ಮುಂದಿನ ಮೆಟ್ರೋ ಮಾರ್ಗಗಳಲ್ಲಿ ಅಪರ್ಣಾ ಧ್ವನಿ ಕೇಳಲ್ಲ, ಹೊಸ ವಾಯ್ಸ್‌ಗಾಗಿ BMRCL ಅಧಿಕಾರಿಗಳಿಂದ ಶೋಧ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?