Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Nipha virus ನಿಫಾ ವೈರಸ್ ಗೆ 2ನೇ ಬಲಿ: ಈ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ
ದೇಶಪ್ರಮುಖ

Nipha virus ನಿಫಾ ವೈರಸ್ ಗೆ 2ನೇ ಬಲಿ: ಈ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ

Share
2 Min Read
SHARE

newsics.com

ತಿರುವನಂತಪುರಂ: ಕೇರಳದಲ್ಲಿ ನಿಪಾ ವೈರಸ್‌ಗೆ ಇನ್ನೊಬ್ಬರು ಬಲಿಯಾಗಿದ್ದು ಧೃಡಪಟ್ಟಿದೆ. ಹೀಗಾಗಿ ಕೇರಳದ ಆರು ಜಿಲ್ಲೆಗಳಾದ ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು, ವಯನಾಡ್ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆಯಿಂದ ಎಚ್ಚರಿಕೆಯಿಂದ ಇರುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ.

ನಿಪಾ ಲಕ್ಷಣಗಳು ಕಂಡುಬಂದಲ್ಲಿ ವರದಿ ಮಾಡುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚಿಸಿದೆ.

ನಿನ್ನೆ ಪಾಲಕ್ಕಾಡ್‌ನ ಕುಮಾರಂಪುತ್ತೂರು ನಿವಾಸಿಯೊಬ್ಬರು ನಿಪಾ ವೈರಸ್‌ ಸೋಂಕಿನಿಂದ ಮೃತಪಟ್ಟಿದ್ದಾರೆ. ಸುಮಾರು 40 ಜನ ಇವರ ಸಂಪರ್ಕದಲ್ಲಿ ಇದ್ದರು(ಭೇಟಿ ಮಾಡಿದ್ದರು). ಹೀಗಾಗಿ ಪಾಲಕ್ಕಾಡ್ ಮತ್ತು ಮಲಪ್ಪುರಂನಲ್ಲಿ ಅನಗತ್ಯ ಆಸ್ಪತ್ರೆ ಭೇಟಿಗಳನ್ನು ತಪ್ಪಿಸುವಂತೆ ಆರೋಗ್ಯ ಇಲಾಖೆ ಜನರಿಗೆ ಸೂಚನೆ ನೀಡಿದೆ. ರೋಗ ಲಕ್ಷಣ ಮತ್ತು ಸಂಪರ್ಕ ಪಟ್ಟಿಯಲ್ಲಿದ್ದ ಕೆಲವರ ವರದಿಗಳು ನೆಗೆಟಿವ್ ಬಂದಿದ್ದರಿಂದ ಆರೋಗ್ಯ ಇಲಾಖೆ ಸ್ವಲ್ಪ ನಿರಾಳರಾಗೊಂಡಿತ್ತು. ಆದರೆ ಹೊಸ ಸಾವು ಆತಂಕ ಮೂಡಿಸಿದೆ.

ಒಂದು ವಾರದ ಹಿಂದೆ ಪಾಲಕ್ಕಾಡ್ ಮಣ್ಣಾರ್ಕಾಡ್ ಕುಮಾರಂಪುತ್ತೂರು ಚಂಗಲೀರಿ ನಿವಾಸಿ 58 ವರ್ಷದ ವ್ಯಕ್ತಿಯೊಬ್ಬರು ಜ್ವರದಿಂದ ಬಳಲುತ್ತಿದ್ದರು. ಅವರು ಮಣ್ಣಾರ್ಕಾಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ವಟ್ಟಂಬಲಂ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಕಳೆದ ಶುಕ್ರವಾರ ಮಲಪ್ಪುರಂ ಪೆರಿಂತಲ್ಮಣ್ಣದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದಾರೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಕುಮಾರಂಪುತ್ತೂರು ಚಂಗಲೀರಿಯ ಮೂರು ಕಿಲೋಮೀಟರ್ ಸುತ್ತಳತೆಯಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗಿದೆ. ಹಾಗೂ ನಿಪಾದಿಂದ ಮೃತರಾದವರ ಸಂಪರ್ಕದಲ್ಲಿದ್ದವರು ಕೂಡಲೇ ಕ್ವಾರಂಟೈನ್‌ಗೆ ಒಳಗಾಗಬೇಕೆಂದು ಆರೋಗ್ಯ ಇಲಾಖೆ ಸೂಚಿಸಿದೆ.

ಪಾಲಕ್ಕಾಡ್, ಮಲಪ್ಪುರಂ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಲ್ಲಿ ಸುಮಾರು 500 ಜನರು ನಿಪಾ ಸಂಪರ್ಕ ಪಟ್ಟಿಯಲ್ಲಿದ್ದಾರೆ. ಮಲಪ್ಪುರಂನಲ್ಲಿ 203, ಕೋಝಿಕ್ಕೋಡ್‌ನಲ್ಲಿ 114, ಪಾಲಕ್ಕಾಡ್‌ನಲ್ಲಿ 178 ಮತ್ತು ಎರ್ನಾಕುಲಂನಲ್ಲಿ ಇಬ್ಬರು ಸಂಪರ್ಕ ಪಟ್ಟಿಯಲ್ಲಿದ್ದಾರೆ. ಮಲಪ್ಪುರಂನಲ್ಲಿ 10 ಮಂದಿ ರೋಗ ಲಕ್ಷಣಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಐಸಿಯುನಲ್ಲಿದ್ದಾರೆ. ಮಲಪ್ಪುರಂನಲ್ಲಿ 62 ಮಾದರಿಗಳು ನೆಗೆಟಿವ್ ಬಂದಿವೆ.

ಈ ಹಿಂದೆ ರೋಗ ದೃಢಪಟ್ಟಿದ್ದ ಪಾಲಕ್ಕಾಡ್ ತಚ್ಚನಾಟ್ಟುಕರ ನಿವಾಸಿ ಯುವತಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಈ ತಿಂಗಳ 1 ರಂದು ಮೃತಪಟ್ಟ ಮಲಪ್ಪುರಂ ಮಂಕಡ ನಿವಾಸಿ 18 ವರ್ಷದ ಯುವಕನಿಗೂ ನಿಪಾ ದೃಢಪಟ್ಟಿತ್ತು. ಈಗ ಚಂಗಲೇರಿ ನಿವಾಸಿಯೊಬ್ಬರ ಸಾವಿನಿಂದಾಗಿ ಕೇರಳದಲ್ಲಿ ನಿಪಾಗೆ ಬಲಿಯಾದವರ ಸಂಖ್ಯೆ 2ಕ್ಕೆ ಏರಿದೆ.

TAGGED:2nd death due to Nipah virus: High alert declared in these districts
Share This Article
Facebook Twitter Copy Link Print
Previous Article Rain Alert: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಜು.20ರವರೆಗೆ ವ್ಯಾಪಕ ಮಳೆ ಸಾಧ್ಯತೆ; ಆರೆಂಜ್ ಅಲರ್ಟ್
Next Article ಕೋತಿಗಳ ದಾಳಿಗೆ ಮೂರುವರೆ ವರ್ಷದ ಕಂದಮ್ಮ ಬಲಿ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?