newsics.com
ತಿರುವನಂತಪುರ: ಪೊಲೀಸ್ ಸಿಬ್ಬಂದಿಯೊಬ್ಬರು ಆಕಸ್ಮಿಕವಾಗಿ ಕೇರಳದ ಪ್ರಸಿದ್ದ ಅನಂತ ಪದ್ಮನಾಭ ದೇಗುಲದಲ್ಲಿ ಸ್ವಚ್ಛತೆ ಮಾಡುವಾಗ ಗುಂಡು ಹಾರಿಸಿದ ಘಟನೆ ನಡೆದಿದೆ.
ದೇವಾಲಯದಲ್ಲಿ ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿಯ ಶಸ್ತ್ರಾಸ್ತ್ರಗಳನ್ನು ಇಡಲಾಗಿದ್ದ ಕೋಣೆಯಲ್ಲಿ ಈ ಘಟನೆ ನಡೆದಿದ್ದು,ಕರ್ತವ್ಯ ಮುಗಿಸಿದ ನಂತರ ಮತ್ತೊಬ್ಬ ಪೊಲೀಸ್ ಸಿಬ್ಬಂದಿಗೆ ಪಿಸ್ತೂಲ್ ಹಸ್ತಾಂತರ ಮಾಡಲು ಅದನ್ನು ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದೆ. ಯಾವುದೇ ಅವಘಡ ಸಂಭವಿಸಿಲ್ಲ.
ಪೊಲೀಸರು.ಆಕಸ್ಮಿಕ ಗುಂಡು ಹಾರಾಟ ಎಂದು ಪ್ರಕರಣ ದಾಖಲಿಸಿದ್ದಾರೆ.