Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Live in Partner‌ ಏನೋ ಕಚ್ಚಿದೆ ಅಂತ ಹೇಳಿ ಲಿವ್ ಇನ್ ಸಂಗಾತಿಯನ್ನು ಆಸ್ಪತ್ರೆಗೆ ಸೇರಿಸಿ ಪ್ರಿಯಕರ ಎಸ್ಕೇಪ್! ; ಯುವತಿ ಸಾವು
ದೇಶಪ್ರಮುಖ

Live in Partner‌ ಏನೋ ಕಚ್ಚಿದೆ ಅಂತ ಹೇಳಿ ಲಿವ್ ಇನ್ ಸಂಗಾತಿಯನ್ನು ಆಸ್ಪತ್ರೆಗೆ ಸೇರಿಸಿ ಪ್ರಿಯಕರ ಎಸ್ಕೇಪ್! ; ಯುವತಿ ಸಾವು

Share
2 Min Read
SHARE

newsics.com

ಭೋಪಾಲ್: ತನ್ನ ಲಿವ್ ಇನ್ ಗೆಳತಿಗೆ ಏನೋ ಕಚ್ಚಿದೆ ಎಂದು ಆಕೆಯನ್ನು ಹೊತ್ತುಕೊಂಡು ಬಂದ ಯುವಕ ಆಸ್ಪತ್ತೆಯೊಂದರ ಬಾಗಿಲ ಬಳಿ ಆಕೆಯನ್ನು ಬಿಟ್ಟು ಪರಾರಿಯಾಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.

ಗಂಭೀರ ಸ್ಥಿತಿಯಲ್ಲಿದ್ದ ತನ್ನ ಲಿವ್ ಇನ್ ಸಂಗಾತಿಯನ್ನು ಆಸ್ಪತ್ರೆಗೆ ದಾಖಲಿಸಿದ ಪ್ರಿಯಕರ, ತಕ್ಷಣದಿಂದ ಅಲ್ಲಿಂದ ಪರಾರಿಯಾಗಿದ್ದಾನೆ.
ಮೃತ ಮಹಿಳೆಯನ್ನು ಸೋನಿ ಎಂದು ಗುರುತಿಸಲಾಗಿದೆ. ಆಕೆಯನ್ನು ಗ್ವಾಲಿಯರ್ನ ಮುರಾರ್ನಲ್ಲಿರುವ ಜಿಲ್ಲಾಸ್ಪತ್ರೆಗೆ ಕರೆತಂದು, ನಕಲಿ ಹೆಸರು ಮತ್ತು ವಿಳಾಸವನ್ನು ನೀಡಿ, ದಾಖಲು ಮಾಡಿಸಿ, ತಕ್ಷಣ ಪ್ರಿಯಕರ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಸೋನಿ ಸಾವಿಗೀಡಾಗಿದ್ದಾಳೆ. ಈಕೆ ಬಿಹಾರದ ನಿವಾಸಿ ಎಂದು ತಿಳಿದುಬಂದಿದೆ.
ವರದಿಗಳ ಪ್ರಕಾರ, ನಿನ್ನೆ ಬೆಳಗಿನ ಜಾವ ಸೋನಿಗೆ ವಿಷಕಾರಿ ಕೀಟವೊಂದು ಕಚ್ಚಿದೆ. ಆಕೆಯ ಸ್ಥಿತಿ ಹದಗೆಡುತ್ತಿರುವುದನ್ನು ಗಮನಿಸಿದ ಆಕೆಯ ಪ್ರಿಯಕರ, ಮನೆ ಮಾಲೀಕರು ಮತ್ತು ಆಟೋ ಚಾಲಕನೊಂದಿಗೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದನು. ಆರಂಭದಲ್ಲಿ ಹೇಗೋ ನಕಲಿ ದಾಖಲೆ ಮತ್ತು ವಿಳಾಸ ನೀಡಿ ಆಕೆಯನ್ನು ದಾಖಲಿಸಿದನು. ಆದರೆ, ದಾಖಲೆಗಳ ಕೊರತೆ ಹಾಗೂ ಆಕೆಯ ಜೊತೆಗಿನ ತಮ್ಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಬಹುದು ಎಂಬ ಭಯದಿಂದ ಚಿಕಿತ್ಸೆ ನಡೆಯುವಾಗ ಆತ ಪರಾರಿಯಾಗಿದ್ದಾನೆ.
ಇನ್ನು ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಆಟೋದಲ್ಲಿ ಜಿಲ್ಲಾಸ್ಪತ್ರೆಗೆ ಕರೆತಂದ ಮೂವರು ಯುವಕರಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಮಹಿಳೆಯನ್ನು ದಾಖಲಿಸಿ ಪರಾರಿಯಾದ ಆಟೋ ನಂಬರ್ ಮೂಲಕ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿದರು.
ವರದಿಗಳ ಪ್ರಕಾರ, ಮೂರು ವರ್ಷಗಳ ಹಿಂದೆ, ಮೃತ ಸೋನಿ ಗ್ವಾಲಿಯರ್ ರೈಲು ನಿಲ್ದಾಣದಲ್ಲಿ ಯುವಕನನ್ನು ಭೇಟಿಯಾದರು. ಮೊದಲ ಪರಿಚಯ ಕ್ರಮೇಣವಾಗಿ ಸ್ನೇಹವಾಗಿ ಬದಲಾಯಿತು. ನಂತರ ಸ್ನೇಹ ಪ್ರೀತಿಗೆ ತಿರುಗಿ, ಮದುವೆಯಾಗದೆ ಒಟ್ಟಿಗೆ ವಾಸಿಸಲು ಇಬ್ಬರು ಪ್ರಾರಂಭಿಸಿದರು. ಇಬ್ಬರೂ ಮಲನ್‌ಪುರದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ಈ ಪ್ರಕರಣದ ಬಗ್ಗೆ ಮಾತನಾಡಿರುವ ಎಸ್‌ಪಿ ಧರ್ಮವೀರ್ ಸಿಂಗ್, ಮಹಿಳೆಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಓಡಿಹೋದ ಯುವಕನನ್ನು ಬಂಧಿಸಲಾಗಿದೆ. ಮೂರು ವರ್ಷಗಳಿಂದ ತಾನು ಆ ಮಹಿಳೆಯೊಂದಿಗೆ ಇದ್ದೆ ಎಂದು ಆತ ಹೇಳಿಕೊಂಡಿದ್ದಾನೆ. ಆದರೆ, ಆತನ ಬಳಿ ಮದುವೆಗೆ ಸಂಬಂಧಿಸಿದ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ.

ಪೋಸ್ ಕೊಡಲು ಹೋಗಿ ಹೊಂಡಕ್ಕೆ ಬಿದ್ದ ಸಾಮಾಜಿಕ ಕಾರ್ಯಕರ್ತ!; ವೈರಲ್ ವಿಡಿಯೋ ನೋಡಿ

TAGGED:Live in Partner says something bit himlover escapes! ; Young woman diestakes live in partner to hospital
Share This Article
Facebook Twitter Copy Link Print
Previous Article ಪೋಸ್ ಕೊಡಲು ಹೋಗಿ ಹೊಂಡಕ್ಕೆ ಬಿದ್ದ ಸಾಮಾಜಿಕ ಕಾರ್ಯಕರ್ತ!; ವೈರಲ್ ವಿಡಿಯೋ ನೋಡಿ
Next Article ಗುಹೆಯಲ್ಲಿ ಪತ್ತೆಯಾದ ಮಹಿಳೆಯೊಂದಿಗಿದ್ದ ಮಕ್ಕಳ ತಂದೆ ಇಸ್ರೇಲ್‌ ಉದ್ಯಮಿ : ಅಧಿಕಾರಿಗಳಿಂದ ಮಾಹಿತಿ ಬಹಿರಂಗ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?