newsics.com
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಹಾಗೂ ಇತರರ ಜಾಮೀನು ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 22 ಕ್ಕೆ ಮುಂದೂಡಿದೆ.
ಬೇಲ್ ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತೀರ್ಪು ಕಾಯ್ದಿರಿಸಿ ವಿಚಾರಣೆ ಮುಂದೂಡಿದೆ .
ದರ್ಶನ್, ಪವಿತ್ರಾಗೌಡ ಸೇರಿದಂತೆ ಏಳು ಜನರ ವಿರುದ್ಧ ದಾಖಲಾಗಿರುವ ಕೊಲೆ ಕೇಸ್‌ನಲ್ಲಿ ಕರ್ನಾಟಕ ಹೈಕೋರ್ಟ್ ಬೇಲ್ ನೀಡಿತ್ತು. ಇದನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ ವಾದ ಪ್ರತಿವಾದ ಆಲಿಸಿ ಜುಲೈ 22ಕ್ಕೆ ತೀರ್ಪು ನೀಡಲಿದೆ.
Reality Show ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ