newsics.com
ನವದೆಹಲಿ: ಶಿಖೋಪುರ ಭೂ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ ಪೂರಕ ಪ್ರಾಸಿಕ್ಯೂಷನ್ ದೂರು (ಚಾರ್ಜ್ಶೀಟ್) ಸಲ್ಲಿಸಿದೆ.
ರಾಬರ್ಟ್ ವಾದ್ರಾ ಸೇರಿದಂತೆ 11 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಇದೆ ವೇಳೆ, ರಾಬರ್ಟ್ ವಾದ್ರಾ ಮತ್ತು ಅವರ ಸಂಸ್ಥೆಗಳಿಗೆ ಸಂಬಂಧಿಸಿದ 36 ಕೋಟಿ ರೂ.ಗೂ ಹೆಚ್ಚು ಮೌಲ್ಯದ 43 ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದೆ.
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರ ಕಂಪನಿಯಾದ ಸ್ಕೈಲೈಟ್ ಹಾಸ್ಪಿಟಾಲಿಟಿಯು 2008 ರಲ್ಲಿ 7.5 ಕೋಟಿ ರೂ.ಗೆ ಶಿಖೋಪುರದಲ್ಲಿ (ಈಗ ಸೆಕ್ಟರ್ 83) 3.53 ಎಕರೆ ಭೂಮಿಯನ್ನು ಖರೀದಿಸಿತು. ನಂತರ ಅದೇ ಭೂಮಿಯನ್ನು ಯೋಜನೆ ಪೂರ್ಣಗೊಳ್ಳದೆ 58 ಕೋಟಿ ರೂಪಾಯಿಗೆ ಮಾರಾಟ ಮಾಡಲಾಯಿತು.
ಈ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ರಿಯಲ್ ಎಸ್ಟೇಟ್ ದೈತ್ಯ ಡಿಎಲ್ಎಫ್ ಮತ್ತು ಆಸ್ತಿ ವ್ಯಾಪಾರಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಆದರ ತನಿಖೆಯನ್ನು ಕೈಗೆತ್ತಿಕೊಂಡಿದ್ದ ಜಾರಿ ನಿರ್ದೇಶನಾಲಯವು ದೆಹಲಿ ವಿಶೇಷ ನ್ಯಾಯಾಲಯಕ್ಕೆ ತನ್ನ ಆರೋಪಪಟ್ಟಿಯನ್ನು ಸಲ್ಲಿಸಿದೆ.