newsics.com
ಯಾದಗಿರಿ: ವಿದ್ಯುತ್ ತಂತಿ ತಗುಲಿ ಮೂವರು ರೈತರು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ.
ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ವಿದ್ಯುತ್ ತಗುಲಿದ್ದು, ಸದಬ ಗ್ರಾಮದ ಮೂವರು ಮೃತಪಟ್ಟಿದ್ದಾರೆ. ಈರಪ್ಪ(40) ದೇವು(30) ಸುರೇಶ್(22) ಮೃತ ದುರ್ದೈವಿಗಳು
ಮರಣೋತ್ತರ ಪರೀಕ್ಷೆಗಾಗಿ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೃತದೇಹ ರವಾನೆ ಮಾಡಲಾಗಿದ್ದು, ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.