Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Khandre ಅಮಾನತ್ತಾದ ಅಧಿಕಾರಿ ಕ್ಷಮೆ ; ಹಿಂಬಡ್ತಿ ನೀಡಿ ಸಸ್ಪೆಂಡ್ ರದ್ದಿಗೆ ಈಶ್ವರ್ ಖಂಡ್ರೆ ಶಿಫಾರಸು
ಕರ್ನಾಟಕಪ್ರಮುಖ

Khandre ಅಮಾನತ್ತಾದ ಅಧಿಕಾರಿ ಕ್ಷಮೆ ; ಹಿಂಬಡ್ತಿ ನೀಡಿ ಸಸ್ಪೆಂಡ್ ರದ್ದಿಗೆ ಈಶ್ವರ್ ಖಂಡ್ರೆ ಶಿಫಾರಸು

Share
1 Min Read
SHARE

newsics.com

ಬೀದರ್: ‘ಎಚ್‌ಎಂಟಿ ವಶದಲ್ಲಿನ ಅರಣ್ಯ ಭೂಮಿಯ ಡಿನೋಟಿಫಿಕೇಶನ್ ಹಾಗೂ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡಿ ಸಿಬಿಐಗೆ ಪತ್ರ ಬರೆದು ಅಮಾನತುಗೊಂಡಿರುವ ಐಎಫ್‌ಎಸ್ ಅಧಿಕಾರಿ ಆರ್. ಗೋಕುಲ್ ತಪ್ಪೊಪ್ಪಿಕೊಂಡು ಬೇಷರತ್ ಕ್ಷಮೆ ಕೋರಿದ್ದು, ಅವರಿಗೆ ಸಿಸಿಎಫ್ ಹುದ್ದೆಗೆ ಹಿಂಬಡ್ತಿ ನೀಡಿ ಅಮಾನತು ರದ್ದುಪಡಿಸಲು ಶಿಫಾರಸು ಮಾಡಲಾಗಿದೆ’ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಆರ್. ಗೋಕುಲ್ ಅಮಾನತು ಅಧಿಕೃತಗೊಳಿಸಲು ಕೇಂದ್ರ ಹವಾಮಾನ ಮತ್ತು ಪರಿಸರ ಸಚಿವಾಲಯ ಒಪ್ಪದೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವುದು ತಮ್ಮ ಗಮನಕ್ಕೆ ಬಂದಿರಲಿಲ್ಲ. ಆದರೆ, ಅಮಾನತು ಮಾಡಿದ 15 ದಿನಗಳ ಒಳಗಾಗಿ ಸವಿವರವಾದ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಲ್ಲ ಎಂಬ ತಾಂತ್ರಿಕ ಕಾರಣದ ಮೇಲೆ ಅಮಾನತು ಅಧಿಕೃತಗೊಳಿಸಲು ಈ ಹಂತದಲ್ಲಿ ಪರಿಗಣಿಸಲು ಬರುವುದಿಲ್ಲ ಎಂದು ಕೇಂದ್ರ ಹವಾಮಾನ ಮತ್ತು ಪರಿಸರ ಸಚಿವಾಲಯ ಹೇಳಿದೆ ಎಂದು ಈಗ ತಿಳಿದು ಬಂದಿದೆ ಎಂದು ಶುಕ್ರವಾರ ರಾತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಿ ಸಿಬಿಐಗೆ ಪತ್ರ ಬರೆದಿದ್ದರ ತಪ್ಪು ಒಪ್ಪಿಕೊಂಡು ಬೇಷರತ್ ಕ್ಷಮೆ ಕೋರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಮಾನತು ರದ್ದುಪಡಿಸುವಂತೆ ಶಿಫಾರಸು ಮಾಡಲಾಗಿದೆ. ಗೋಕುಲ್ ಮಾಡಿರುವ ಸರಣಿ ತಪ್ಪು-ಒಪ್ಪುಗಳ ಹಿನ್ನೆಲೆಯಲ್ಲಿ ಹಾಲಿ ಎಪಿಸಿಸಿಎಫ್ ಆಗಿರುವ ಅವರಿಗೆ ಸಿಸಿಎಫ್ ಆಗಿ ಹಿಂಬಡ್ತಿ ನೀಡಿ, ಅಮಾನತು ರದ್ದುಪಡಿಸುವ ಬಗ್ಗೆ ಕ್ರಮ ವಹಿಸಲು ಶಿಫಾರಸು ಮಾಡಿರುವುದಾಗಿ ಹೇಳಿದ್ದಾರೆ.
ಎಚ್‌ಎಂಟಿ ವಶದಲ್ಲಿರುವ ₹14,300 ಕೋಟಿ ಮೌಲ್ಯದ ಅರಣ್ಯ ಭೂಮಿ 7 ಕೋಟಿ ಕನ್ನಡಿಗರ ಆಸ್ತಿಯಾಗಿದೆ. ಅದನ್ನು ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಅಕ್ರಮವಾಗಿ ಮಾರಾಟ ಮಾಡಲಾಗಿದೆ. ಇನ್ನೂ ಅಲ್ಲಿ 280 ಎಕರೆ ಭೂಮಿ ಅರಣ್ಯ ಸ್ವರೂಪದಲ್ಲೇ ಇದೆ. ಆದರೆ, ಇದು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಗೋಕುಲ್ ಸುಪ್ರೀಂಕೋರ್ಟ್ ಗೆ ತಪ್ಪು ಮಾಹಿತಿ ನೀಡಿ, ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ನ್ಯಾಯಪೀಠ ಪರಾಮರ್ಶಿಸಿ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

KDP meeting ಕೆಡಿಪಿ ಸಭೆಯಲ್ಲಿ, ಕದ್ದುಮುಚ್ಚಿ ರಮ್ಮಿ ಆಟ ಆಡುತ್ತಿದ್ದ ಸರ್ಕಾರಿ ಅಧಿಕಾರಿ!

TAGGED:Apology to suspended officer | Recommendation to reverse promotion and cancel suspension: Khandre
Share This Article
Facebook Twitter Copy Link Print
Previous Article KDP meeting ಕೆಡಿಪಿ ಸಭೆಯಲ್ಲಿ, ಕದ್ದುಮುಚ್ಚಿ ರಮ್ಮಿ ಆಟ ಆಡುತ್ತಿದ್ದ ಸರ್ಕಾರಿ ಅಧಿಕಾರಿ!
Next Article ಹುಡುಗಿ ಕೈಕೊಟ್ಟಳೆಂದು ಅರೆಹುಚ್ಚನಾದ ಯುವಕ; ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ!

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?