Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಡುಗಿ ಕೈಕೊಟ್ಟಳೆಂದು ಅರೆಹುಚ್ಚನಾದ ಯುವಕ; ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ!
ಕರ್ನಾಟಕಪ್ರಮುಖ

ಹುಡುಗಿ ಕೈಕೊಟ್ಟಳೆಂದು ಅರೆಹುಚ್ಚನಾದ ಯುವಕ; ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ!

Share
2 Min Read
SHARE

newsics.com

ಚಿಕ್ಕಮಗಳೂರು: ಹೆಡ್ ಕಾನ್‌ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಕಾಂತರಾಜ್ (45) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಮೂಲತಃ ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯವರಾಗಿರುವ ಕಾಂತರಾಜ್ ಅವರು ಈಗಾಗಲೇ ಎ.ಎನ್.ಎಫ್. ಹಾಗೂ ಕಳಸ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಕಂಪ್ಯೂಟರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಪಘಾತವೊಂದರಲ್ಲಿ ತಮ್ಮ ಬಲಗಾಲನ್ನು ಕಳೆದುಕೊಂಡಿದ್ದ ಕಾಂತರಾಜ್, ಕೃತಕ ಕಾಲಿನಿಂದ ಕಷ್ಟಪಟ್ಟು ಕರ್ತವ್ಯ ನಿರ್ವಹಿಸುತ್ತಿದ್ದರು.
ದೈಹಿಕ ಅಂಗವೈಕಲ್ಯದಿಂದ ಉಂಟಾದ ನಿರಾಶೆ ಹಾಗೂ ಮಾನಸಿಕ ಖಿನ್ನತೆಯೇ ಅವರು ಆತ್ಮಹ*ತ್ಯೆ ಮಾಡಿಕೊಳ್ಳಲು ಕಾರಣವೆನ್ನಲಾಗಿದೆ. ಘಟನೆಯ ವೇಳೆ ಅವರ ಮನೆಯಲ್ಲಿ ಬೇರಾರು ಇದ್ದಿರಲಿಲ್ಲ. ಕುಟುಂಬದವರು ಊರಿಗೆ ತೆರಳಿದ್ದರು ಎನ್ನಲಾಗಿದೆ.

ಕಾಂತರಾಜ್ ಅವರು ಮಾನಸಿಕವಾಗಿ ತೀವ್ರ ಒತ್ತಡ ಅನುಭವಿಸುತ್ತಿದ್ದರು ಎಂಬುದು ಅವರ ಸಹೋದ್ಯೋಗಿಗಳ ಹೇಳಿಕೆಯಾಗಿದೆ. ಇನ್ನು ಸರ್ಕಾರಿ ನೌಕರನಾಗಿದ್ದರೂ ಸ್ವಯಂ ಸಾವಿಗೆ ಶರಣಾಗಲು ಬೇರಾವ ಕಾರಣ ಇರಬಹುದು ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ.
ಹುಡುಗಿ ಕೈಕೊಟ್ಟ ಹೋದಳೆಂದು ಅರೆಹುಚ್ಚನಾದ ಯುವಕ:
ಇನ್ನೊಂದು ಘಟನೆಯಲ್ಲಿ ಪ್ರೀತಿ ವಿಫಲವಾದ ದುಃಖದಲ್ಲಿಯೇ ಅರೆಹುಚ್ಚನಾದ ಯುವಕ, ತನ್ನ ತಲೆಗೆ ಬಾಟಲಿಯಿಂದ ಹೊಡೆದುಕೊಂಡಿದ್ದಾನೆ. ತನ್ನ ತಲೆಯಲ್ಲಿ ರಕ್ತ ಹರಿಯುತ್ತಿದ್ದರೂ, ಸುಮ್ಮನೆ ಕುಳಿತಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್‌ಪೋಸ್ಟ್ ಬಳಿ ಗುರುವಾರ ಬೆಳಕಿಗೆ ಬಂದಿದೆ.
ತಮಿಳುನಾಡು ಮೂಲದ ಈ ಯುವಕ, ಕೆಲ ತಿಂಗಳ ಹಿಂದೆ ಕಾಫಿತೋಟದ ಕೆಲಸಕ್ಕಾಗಿ ಚಿಕ್ಕಮಗಳೂರು ಬಂದಿದ್ದರು. ಕೆಲಸದಲ್ಲಿಯೇ ಇಲ್ಲಿಯ ಹುಡುಗಿಯನ್ನು ಪ್ರೀತಿ ಮಾಡುತ್ತಿದ್ದರು. ಆದರೆ, ಕಾಲಕ್ರಮೇಣ ಹುಡುಗಿ ಕೈಕೊಟ್ಟು ಬೇರೆ ಯಾರೊಂದಿಗೋ ಮದುವೆಯಾಗಿದ್ದಾಳೆ. ಈ ಘಟನೆಯು ಯುವಕನ ಮನಸ್ಸಿಗೆ ಆಘಾತ ಉಂಟುಮಾಡಿ, ತಮಿಳುನಾಡಿಗೆ ಹಿಂದಿರುಗಿದಿದ್ದಾನೆ. ಆದರೆ, ಈ ದುಃಖ ಮರೆಯದ ಯುವಕ ಬಾಟಲಿಯೊಂದನ್ನು ತನ್ನ ತಲೆಗೆ ಹೊಡೆದು ರಕ್ತ ಹರಿಯುವ ಸ್ಥಿತಿಯಲ್ಲಿ ನಡು ರಸ್ತೆಯೇ ಸುಮ್ಮನೆ ಕುಳಿತಿದ್ದನು.
ಅಲ್ಲಿನ ಸಿಬ್ಬಂದಿ ಹಾಗೂ ಪೊಲೀಸರು ಆತನನ್ನು ತಕ್ಷಣ ಗಮನಿಸಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕನ ಶಾರೀರಿಕ ಸ್ಥಿತಿ ಸ್ಥಿರವಿದ್ದರೂ, ಮಾನಸಿಕ ಸ್ಥಿತಿ ಅತ್ಯಂತ ಅಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Khandre ಅಮಾನತ್ತಾದ ಅಧಿಕಾರಿ ಕ್ಷಮೆ ; ಹಿಂಬಡ್ತಿ ನೀಡಿ ಸಸ್ಪೆಂಡ್ ರದ್ದಿಗೆ ಈಶ್ವರ್ ಖಂಡ್ರೆ ಶಿಫಾರಸು

TAGGED:Young man goes mad after girl gives him away; Head constable commits suicide!
Share This Article
Facebook Twitter Copy Link Print
Previous Article Khandre ಅಮಾನತ್ತಾದ ಅಧಿಕಾರಿ ಕ್ಷಮೆ ; ಹಿಂಬಡ್ತಿ ನೀಡಿ ಸಸ್ಪೆಂಡ್ ರದ್ದಿಗೆ ಈಶ್ವರ್ ಖಂಡ್ರೆ ಶಿಫಾರಸು
Next Article Silver Price ಚಿನ್ನ ಬಿಟ್ಟಾಕಿ, ಈಗ ಬೆಳ್ಳಿ ಖರೀದಿಸಿ: ಗೋಲ್ಡ್‌ ರೇಟ್ ಇಳಿಕೆಯ ರಹಸ್ಯ ಬಿಚ್ಚಿಟ್ಟ Citi ವರದಿ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?