Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Government School ತಾನು ಕಲಿತ ಸರ್ಕಾರಿ ಶಾಲೆಯ ನವೀಕರಣಕ್ಕೆ 14 ಕೋಟಿ ದಾನ ಮಾಡಿದ ಬೆಂಗಳೂರಿನ ವೈದ್ಯ!
ಕರ್ನಾಟಕಪ್ರಮುಖ

Government School ತಾನು ಕಲಿತ ಸರ್ಕಾರಿ ಶಾಲೆಯ ನವೀಕರಣಕ್ಕೆ 14 ಕೋಟಿ ದಾನ ಮಾಡಿದ ಬೆಂಗಳೂರಿನ ವೈದ್ಯ!

Share
2 Min Read
SHARE

newsics.com

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರು ಗ್ರಾಮದ ವೈದ್ಯ ಡಾ. ಹೆಚ್‌ ಎಂ ವೆಂಕಟಪ್ಪ ಅವರು, ತಂದೆ-ತಾಯಿ ಸ್ಮರಣಾರ್ಥವಾಗಿ ತಮ್ಮದೇ ಕಣ್ವ ಫೌಂಡೇಷನ್‌ ವತಿಯಿಂದ, ತಾವು ಓದಿದ್ದ ಸರ್ಕಾರಿ ಶಾಲೆಗೆ ಹೊಸ ರೂಪ ಕೊಟ್ಟಿದ್ದಾರೆ.

ಶ್ರೀಮತಿ ಚನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಸ್ಕೂಲ್ಗೆ ಸುತ್ತಮುತ್ತಲಿನ ಗ್ರಾಮಗಳ ಹೆಚ್ಚಿನ ಪೋಷಕರು ಪೈಪೋಟಿಗೆ ಬಿದ್ದು ತಮ್ಮ ಮಕ್ಕಳನ್ನು ದಾಖಲಿಸುತ್ತಿದ್ದಾರೆ. ಈ ವರ್ಷ ಬೇಸಿಗೆ ರಜೆ ಮುಗಿಯುವ ಹೊತ್ತಿಗೆ ಹಳೇ ಶಿಥಿಲ ಕಟ್ಟಡಗಳನ್ನು ನೆಲಸಮ ಮಾಡಿ, ಹೊಸ ಕಟ್ಟಡಕ್ಕೆ ತರಗತಿಗಳನ್ನು ಸ್ಥಳಾಂತರಿಸಲಾಗಿದೆ. ಎರಡು ಪ್ರತ್ಯೇಕ ಕಟ್ಟಡಗಳ ಹೈಟೆಕ್ ಶಾಲೆ 1,500 ವಿದ್ಯಾರ್ಥಿಗಳ ಸಾಮರ್ಥ್ಯ ಹೊಂದಿದೆ. ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣಕ್ಕೆ ವ್ಯವಸ್ಥೆ ಇದೆ. ಗ್ರಾಮದ ಸುತ್ತಲಿನ 12 ಹಳ್ಳಿಗಳ ಮಕ್ಕಳು ಇಲ್ಲಿ ಓದುತ್ತಿದ್ದಾರೆ.‌ ನೂತನ ಶಾಲಾ ಕಟ್ಟಡವನ್ನ ಶುಕ್ರವಾರ ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿದರು.

ಸದ್ಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಒಳಗೊಂಡಂತೆ ಸುಮಾರು 850 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಓದುತ್ತಿದ್ದಾರೆ. ಪ್ರಸಕ್ತ ಸಾಲಿನಿಂದ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ದ್ವಿತೀಯ ಪಿಯುವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದ ಶಿಕ್ಷಣಕ್ಕೆ ಇಲ್ಲಿ ಸೌಲಭ್ಯ ಕಲ್ಪಿಸಲಾಗಿದೆ. ಈ ವರ್ಷ 150ಕ್ಕೂ ಅಧಿಕ ವಿದ್ಯಾರ್ಥಿಗಳ ದಾಖಲಾತಿಯಾಗಿದೆ. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲೂ ಕಾನ್ವೆಂಟ್ ಮಾದರಿ ಶಿಕ್ಷಣ ಸಿಗಬೇಕು ಎಂಬ ಆಶಯದೊಂದಿಗೆ ಶಾಲೆಯನ್ನು ವೈದ್ಯ ಹೆಚ್‌ ಎಂ ವೆಂಕಟಪ್ಪ ಕಟ್ಟಿಸಿದ್ದಾರೆ.

8ನೇ ತರಗತಿವರೆಗೆ ತಮ್ಮೂರಿನ ಈ ಸರ್ಕಾರಿ ಶಾಲೆಯಲ್ಲಿ ವ್ಯಾಸಾಂಗ ಮಾಡಿದ ವೆಂಕಟಪ್ಪ, ಮುಂದೆ ಸರ್ಕಾರಿ ವೈದ್ಯರಾದರು. ವಿವಿಧೆಡೆ ಹಲವು ವರ್ಷ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದರು. ನಂತರ ಬೆಂಗಳೂರಿನಲ್ಲಿ ಕಣ್ವ ಡಯಾಗ್ನಾಸ್ಟಿಕ್ ಕೇಂದ್ರ ಆರಂಭಿಸಿದ ಅವರು ಕಣ್ವ ಫೌಂಡೇಷನ್ ಆರಂಭಿಸಿ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ. ವೈದ್ಯ ಹೆಚ್‌ ಎಂ ವೆಂಕಟಪ್ಪ ಅವರ ಕಾರ್ಯಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹೊಸ ಕಟ್ಟಡದಲ್ಲಿ 51 ಕೊಠಡಿಗಳು ಇವೆ. 10 ಸಾವಿರ ಪುಸ್ತಕಗಳ ಸಾಮರ್ಥ್ಯದ ಗ್ರಂಥಾಲಯ ಇದೆ. 40 ಕಂಪ್ಯೂಟರ್‌ ಹೊಂದಿರುವ ಲ್ಯಾಬ್ ವಿಜ್ಞಾನ ಹಾಗೂ ಗಣಿತ ಪ್ರಯೋಗಾಲಯ ಸುಸಜ್ಜಿತ ಡೆಸ್ಕ್‌ ಹಾಗೂ ಡಿಜಿಟಲ್ ಬೋರ್ಡ್‌ ಸಿದ್ಧವಾಗುತ್ತಿದೆ. ಕಟ್ಟಡದ ಪ್ರತಿ ಅಂತಸ್ತಿನಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳಿವೆ. ‌

Actor Darshan ಥೈಲ್ಯಾಂಡ್ನಲ್ಲಿ ಯಾಚ್ ಡ್ರೈವ್ ಮಾಡಿದ ದರ್ಶನ್

TAGGED:A Bengaluru doctor donated 14 crores for the renovation of the government school where he studied!
Share This Article
Facebook Twitter Copy Link Print
Previous Article Actor Darshan ಥೈಲ್ಯಾಂಡ್ನಲ್ಲಿ ಯಾಚ್ ಡ್ರೈವ್ ಮಾಡಿದ ದರ್ಶನ್
Next Article ಬಾರ್ ನಲ್ಲಿ ಗಲಾಟೆ, ಯುವತಿ, ಆಕೆಯ ಬಾಯ್ ಫ್ರೆಂಡ್ ಥಳಿಸಿದ ಬೌನ್ಸರ್ ಗಳು!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?