Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉದ್ಯಮಿಗಳ ವಿರೋಧಕ್ಕೆ ಬೆದರಿದ ಸರ್ಕಾರ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಡೆ, ಸಿಎಂ ಮಾಹಿತಿ
ಕರ್ನಾಟಕಪ್ರಮುಖ

ಉದ್ಯಮಿಗಳ ವಿರೋಧಕ್ಕೆ ಬೆದರಿದ ಸರ್ಕಾರ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಡೆ, ಸಿಎಂ ಮಾಹಿತಿ

Share
2 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಕಂಪನಿಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75 ಮೀಸಲಾತಿ ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ.

ಮಂಗಳವಾರ ಸಚಿವ ಸಂಪುಟ ಅನುಮೋದನೆ ನೀಡಿದ್ದ ಮಸೂದೆ ಕುರಿತು ಮತ್ತಷ್ಟು ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ಬೆನ್ನಲ್ಲೇ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಉದ್ಯಮ ಸಂಘಟನೆಯಾದ ನಾಸ್ಕಾಮ್ ಸಹ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಈ ರೀತಿಯ ಮಸೂದೆ ಕಳವಳಕಾರಿಯಾದುದು. ಇದು ಉದ್ಯಮದ ಬೆಳವಣಿಗೆಗೆ ಧಕ್ಕೆ ತರುತ್ತದೆ. ರಾಜ್ಯಕ್ಕೆ ಇರುವ ಜಾಗತಿಕ ಬ್ರ್ಯಾಂಡಿಂಗ್ಗೂ ಧಕ್ಕೆ ಆಗುತ್ತದೆ. ಈ ಮಸೂದೆಯಲ್ಲಿರುವ ಕಾನೂನುಗಳ ಬಗ್ಗೆ ನಾಸ್ಕಾಮ್ ಸದಸ್ಯರಿಗೆ ಆತಂಕ ಇದೆ. ಈ ಮಸೂದೆಯನ್ನು ಹಿಂಪಡೆಯಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇವೆ ಎಂದು ನಾಸ್ಕಾಮ್ ಹೇಳಿತ್ತು.

ಇದನ್ನೇ ಬಂಡವಾಳವಾಗಿಸಿಕೊಂಡ ನೆರೆ ರಾಜ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪುತ್ರ ಈ ವಿಷಯವನ್ನೇ ಪ್ರಸ್ತಾಪಿಸಿ, ನಮ್ಮ ರಾಜ್ಯಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದರು.

ಸದ್ಯಕ್ಕೆ ಉದ್ಯಮಿಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಮಸೂದೆಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ರಾಜ್ಯ ಸರ್ಕಾರದ ಮಸೂದೆ ಪ್ರಕಾರ, ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುತ್ತದೆ.

ಸಾಕಷ್ಟು ಅರ್ಹ ಅಭ್ಯರ್ಥಿಗಳು ಇಲ್ಲದೇ ಇದ್ದರೆ ಸರ್ಕಾರದ ಸಹಯೋಗದೊಂದಿಗೆ ಉದ್ಯಮವು ಮೂರು ವರ್ಷಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಅವರನ್ನು ತೊಡಗಿಸಿಕೊಳ್ಳಬೇಕು. ಪ್ರಸ್ತಾವಿತ ಕಾನೂನಿನ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳ ಕಾಲಾವಕಾಶ ನೀಡಲು ಸರ್ಕಾರ ಯೋಜನೆ ರೂಪಿಸುತ್ತಿದೆ.

ಮಸೂದೆಯ ಮುಖ್ಯಾಂಶಗಳು

* ಆಡಳಿತಾತ್ಮಕ ಹುದ್ದೆಗೆ 50% (ಸೂಪರ್‌ವೈಸರ್, ವ್ಯವಸ್ಥಾಪಕ, ಟೆಕ್ನಿಕಲ್ ಇತರೆ ಉನ್ನತ ಹುದ್ದೆಗಳು)

* ಆಡಳಿತೇತರ ಹುದ್ದೆಗೆ 75% (ಕರ್ಕ್‌, ಕೌಶಲ ರಹಿತ, ಅರೆ ಕೌಶಲ ಗುತ್ತಿಗೆ ನೌಕರ)

* ಉಲ್ಲಂಘಿಸಿದರೆ 25 ಸಾವಿರ ರೂ. ವರೆಗೆ ದಂಡ ಕನಿಷ್ಟ 10 ಸಾವಿರ ರೂ., ಗರಿಷ್ಟ 25 ಸಾವಿರ ರೂ.

* ದಂಡ ವಿಧಿಸಿದ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ.

ಯಾರ‌್ಯಾರು ಅರ್ಹರು?

* ಕರ್ನಾಟಕದಲ್ಲಿ ಹುಟ್ಟಿರಬೇಕು.

* ಕರ್ನಾಟಕದಲ್ಲಿ 15 ವರ್ಷ ವಾಸವಿರಬೇಕು.

* ಕನ್ನಡ ಓದಲು, ಬರೆಯಲು ಮಾತನಾಡಲು ಬರಬೇಕು.

* ನೋಡಲ್ ಏಜೆನ್ಸಿ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

https://x.com/siddaramaiah/status/1813596347792310500?t=3B8SwN8XOBtN3EfTwNI2sA&s=19

https://x.com/siddaramaiah/status/1813596347792310500?t2gP9HHPGfy3OzEzFOPYeLg&s=19

ಗುಂಡಿನ ಚಕಮಕಿ: 12 ನಕ್ಸಲರ ಎನ್‌ಕೌಂಟರ್, ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ

ಇಂದಿನ ರಾಶಿ ಭವಿಷ್ಯ 18-07-2024 … ಕರ್ಕಾಟಕ- ಬಂಧು ಮಿತ್ರರೊಂದಿಗೆ ವಿವಾದ, ಸಿಂಹ- ಹಣಕಾಸಿನ ವಿಚಾರದಲ್ಲಿರಲಿ ಎಚ್ಚರಿಕೆ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ ಕೆ9 ಭದ್ರತೆ! ಏನಿದು ಕೆ9?

ಕೇರಳದಲ್ಲಿ ಕಾಡಾನೆ ಸಂಖ್ಯೆ ಶೇ.7ರಷ್ಟು ಇಳಿಕೆ! ಈಗ ದೇವರ ನಾಡಲ್ಲಿವೆ 1793 ಕಾಡಾನೆಗಳು

ತಮ್ಮದೇ ಖಾಸಗಿ ವಿಡಿಯೋ ಲೀಕ್ ಮಾಡಿದರೇ ನಟಿ ಊರ್ವಶಿ

TAGGED:Government shocked businessmen's opposition Blocking the job reservation bill for Kannadigas CM information newsics ಕನ್ನಡಿಗರಿಗೆ ಉದ್ಯೋಗ ಮೀಸಲಾತಿ
Share This Article
Facebook Twitter Copy Link Print
Previous Article ಗುಂಡಿನ ಚಕಮಕಿ: 12 ನಕ್ಸಲರ ಎನ್‌ಕೌಂಟರ್, ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ
Next Article ಅಶ್ಲೀಲ ವಿಡಿಯೊ ನೋಡಿ ಎಂಟರ ಬಾಲಕಿ‌ ಮೇಲೆ ಅತ್ಯಾಚಾರಗೈದು ಕೊಂದು ನದಿಗೆ ಬಿಸಾಕಿದ್ದ ಮೂವರು ಬಾಲಕರ ಬಂಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?