newsics.com
ಮೈಸೂರು: ಪ್ರವಾಸಕ್ಕೆ ಬಂದಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಮೈಸೂರು ತಾಲೂಕಿನ ಮೀನಾಕ್ಷಿಪುರ ಬಳಿಯ ಕೆಆರ್ಎಸ್ ಹಿನ್ನೀರಿನಲ್ಲಿ ನಡೆದಿದೆ.
ಪ್ರಶಾಂತ್, ಸಿದ್ದ ಮತ್ತು ಕೃಷ್ಣ ನೀರುಪಾಲಾದವರು. ಮೃತರು ಮಂಡ್ಯದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು.
ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ಪ್ರಕರಣ ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.