Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains: ಕರ್ನಾಟಕದಾದ್ಯಂತ ಮಳೆ ಅಬ್ಬರಕ್ಕೆ ಒಂದೇ ದಿನ ಐವರು ಸಾವು
ಕರ್ನಾಟಕಪ್ರಮುಖ

Karnataka Rains: ಕರ್ನಾಟಕದಾದ್ಯಂತ ಮಳೆ ಅಬ್ಬರಕ್ಕೆ ಒಂದೇ ದಿನ ಐವರು ಸಾವು

Share
1 Min Read
SHARE

newsics.com

ಬೆಂಗಳೂರು: ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ಮಳೆ ಸಂಬಂಧಿ ಅವಘಡಗಳಿಂದ ಭಾನುವಾರ ಒಂದೇ ದಿನ ಐವರು ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸಂಕಷ್ಟಗಳ ಸರಮಾಲೆಯನ್ನೇ ತಂದೊಡ್ಡಿದೆ.

ಕಾರವಾರದ ಪಿಕಳೆ ಆಸ್ಪತ್ರೆ ಬಳಿ ಗಾಳಿ, ಮಳೆಗೆ ಬೃಹತ್ ಮರವೊಂದು ಕಾರಿನ ಮೇಲೆಯೇ ಉರುಳಿಬಿದ್ದಿದೆ. ಗರ್ಭಿಣಿ ಸೊಸೆಯನ್ನು ಆಸ್ಪತ್ರೆಗೆ ಕರೆತಂದಿದ್ದ ಅತ್ತೆ ಮೇಲೆ ಮರ ಬಿದ್ದು ಅಸುನೀಗಿದ್ದಾರೆ. ಅತ್ತೆ ಲಕ್ಷ್ಮೀ ತನ್ನ 8 ತಿಂಗಳ ಗರ್ಭಿಣಿ ಸೊಸೆ ಸುನಿತಾರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆತಂದಿದ್ದರು. ಆಸ್ಪತ್ರೆ ಬಳಿ ಚಾಲಕ ಹಾಗೂ ಸೊಸೆ ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆಯೇ, ಬೃಹತ್ ಮರ ಕಾರಿನ ಮೇಲೆಯೇ ಉರುಳಿ ಬಿದ್ದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅತ್ತೆ ಲಕ್ಷ್ಮೀ ಕಾರಿನಲ್ಲೇ ಮೃತಪಟ್ಟಿದ್ದಾರೆ.

ಮೈಸೂರು ತಾಲೂಕಿನ ಮೀನಾಕ್ಷಿಪುರ ಬಳಿಯ ಕೆಆರ್ಎಸ್ ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಕೆಆರ್ಎಸ್ ಹಿನ್ನೀರಿನ ಪ್ರದೇಶ ಮೋಜು ಮಸ್ತಿಗೆ ಕುಖ್ಯಾತಿ ಪಡೆದಿದೆ. ಸಮುದ್ರದಂತೆಯೇ ಕಾವೇರಿ ಹಿನ್ನೀರಿನಲ್ಲಿ ಅಲೆಗಳು ಬರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಭಾನುವಾರ ಮೋಜು ಮಸ್ತಿಗೆಂದು ಬಂದಿದ್ದ ಮಂಡ್ಯ ನರ್ಸಿಂಗ್ ಕಾಲೇಜಿನ ಪ್ರಶಾಂತ್, ಸಿದ್ದೇಶ್, ಕೃಷ್ಣ ದಾರುಣವಾಗಿ ಸಾವಿಗೀಡಾಗಿದ್ದಾರೆ.

ಭಾರೀ ಮಳೆಗೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಬ್ಬಿ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಪ್ರವಾಸಿಗ ಬೆಂಗಳೂರು ಮೂಲದ ರಮೇಶ್ ನೀರುಪಾಲಾಗಿದ್ದಾರೆ. ಫಾಲ್ಸ್ ಮುಂದೆ ಫೋಟೊಗೆ ಪೋಸ್ ಕೊಡುವಾಗಲೇ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಜುಲೈ 21 ರಿಂದ 24ರ ವರೆಗೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ 2 ದಿನ ಆರೆಂಜ್ ಅಲರ್ಟ್ ಘೋಷಣೆ ಆಗಿದ್ದು, ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

GOOD MORNING Today’s prediction ಇಂದಿನ ರಾಶಿ ಭವಿಷ್ಯ, 21-07-2025,‌ ಸೋಮವಾರ, ನಿಮ್ಮ ಗ್ರಹಗತಿ ಇಂದು ಹೇಗಿದೆ?

TAGGED:Karnataka Rains: Five people died in a single day due to heavy rain across Karnataka
Share This Article
Facebook Twitter Copy Link Print
Previous Article GOOD MORNING Today’s prediction ಇಂದಿನ ರಾಶಿ ಭವಿಷ್ಯ, 21-07-2025,‌ ಸೋಮವಾರ, ನಿಮ್ಮ ಗ್ರಹಗತಿ ಇಂದು ಹೇಗಿದೆ?
Next Article Parliament Monsoon Session; ಸಂಸತ್ ನಲ್ಲಿ ಇಂದಿನಿಂದ ಮುಂಗಾರು ಸಂಗ್ರಾಮ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?