newsics.com
ಅಂಕೋಲಾ(ಉತ್ತರ ಕನ್ನಡ): ಖಾಸಗಿ ಬಸ್ ಹಳ್ಳಕ್ಕೆ ಉರುಳಿ ಓರ್ವ ಮೃತಪಟ್ಟು, 18 ಜನ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಅಗಸೂರು ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ. ಗಾಯಗೊಂಡವರಲ್ಲಿ
ಐವರ ಸ್ಥಿತಿ ಗಂಭೀರವಾಗಿದೆ.
ಬೆಳಗಾವಿ ಕಡೆಯಿಂದ ಮಂಗಳೂರಿಗೆ ಹೊರಟಿದ್ದ ಸ್ಲೀಪರ್ ಕೋಚ್ ಖಾಸಗಿ ಬಸ್ ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅಗಸೂರು ಬಳಿ ಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿದೆ ಎನ್ನಲಾಗುತ್ತಿದ್ದು ಬಸ್ಸಿನ ಹಿಂಬದಿ ಮೇಲ್ಬಾಗದ ಕೋಚಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಮೃತ ಪಟ್ಟಿದ್ದಾನೆ.
ಇಬ್ಬರು ಮಕ್ಕಳು ಸೇರಿದಂತೆ 18 ಜನರು ಗಾಯಗೊಂಡಿದ್ದು
ಅಂಕೋಲಾ ಮತ್ತು ಕಾರವಾರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ ಐದು ಜನರಲ್ಲಿ ಮೂವರನ್ನು ಬೆಳಗಾವಿ ಮತ್ತು ಇಬ್ಬರನ್ನು ಮಂಗಳೂರು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.
ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆ ಮತ್ತು ಹದಗೆಟ್ಟ ರಸ್ತೆಯಿಂದಾಗಿ ಬಸ್ ನಿಯಂತ್ರಣ ತಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕ್ರೇನ್ ಬಳಸಿ ಮೃತ ದೇಹವನ್ನು ಹೊರಕ್ಕೆ ತೆಗೆಯಲಾಗಿದ್ದು, ಸ್ಥಳೀಯರು ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
SHOCKING : ಕಳೆದ 6 ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ, 19 ಸಾವು : ಆರೋಗ್ಯ ಇಲಾಖೆ ಮಾಹಿತಿ
Karnataka Rains: ಕರ್ನಾಟಕದಾದ್ಯಂತ ಮಳೆ ಅಬ್ಬರಕ್ಕೆ ಒಂದೇ ದಿನ ಐವರು ಸಾವು