newsics.com
ನವದೆಹಲಿ: ಮುಡಾ ಕೇಸ್‍ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಯವರಿಗೆ ಬಿಗ್ ರಿಲೀಫ್ ಸಿಕ್ಕಿದೆ.ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧದ ಮುಡಾ ಕೇಸ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಇ.ಡಿ.ಗೆ ತೀವ್ರ ಹಿನ್ನಡೆಯಾಗಿದೆ.
ಇ.ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್ ಗವಾಯಿ ನೇತೃತ್ವದ ಪೀಠ, ಇ.ಡಿಯನ್ನು ಟೀಕಿಸಿದೆ. ಮತದಾರರ ಮುಂದೆ ರಾಜಕೀಯ ನಡೆಯಲಿ. ಇದರಲ್ಲಿ ನಿಮ್ಮನ್ನು ಯಾಕೆ ಬಳಸಿಕೊಳ್ಳಲಾಗುತ್ತಿದೆ. ದಯವಿಟ್ಟು ನಮ್ಮನ್ನು ಬಾಯಿ ತೆರೆಯಲು ಬಿಡಬೇಡಿ. ಇಲ್ಲದಿದ್ದರೆ ನಾವು ಕೆಲವು ಕಠಿಣ ಟೀಕೆಗಳನ್ನು ಮಾಡಬೇಕಾಗಬಹುದು ಎಂದು ಇ.ಡಿ ಕಾರ್ಯವೈಖರಿಗೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.
ಹೈಕೋರ್ಟ್ ಆದೇಶದ ವಿರುದ್ಧ ಇ.ಡಿ. ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಲು ಸುಪ್ರೀಂಕೋರ್ಟ್ ನಿರಾಕರಿಸಿತ್ತು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ನಿವೇಶನಗಳನ್ನು ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿರುವ ಸಮನ್ಸ್ ಹೈಕೋರ್ಟ್ ರದ್ದುಪಡಿಸಿ ಮಾರ್ಚ್ 7 ರಂದು ಆದೇಶಿಸಿತ್ತು.
ಸಮನ್ಸ್ ರದ್ದು ಕೋರಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು. ಇವುಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ, ಆದೇಶ ನೀಡಿತ್ತು.