newsics.com
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ. ಕೊಲೆ ಪ್ರಕರಣದ ಎ1 ಆರೋಪಿ ಜಗ್ಗ ಅಲಿಯಾಸ್ ಜಗದೀಶ್ ನಟಿ ರಚಿತಾ ರಾಮ್‌ಗೆ ಉಡುಗೊರೆ ನೀಡಿರುವ ಫೋಟೋಗಳು ವೈರಲ್ ಆಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರವಿ ಬೋಪಣ್ಣ ಸಿನಿಮಾದ ಶೂಟಿಂಗ್ ವೇಳೆ ಈಗ ನಟಿ ರಚಿತಾ ರಾಮ್‌ಗೆ ಸೀರೆ ಹಾಗೂ ಚಿನ್ನಾಭರಣವನ್ನು ಉಡುಗೊರೆಯಾಗಿ ನೀಡಿದ್ದ. ಜಗ್ಗ ನಟಿ ರಚಿತಾ ರಾಮ್ ಗೆ ರೇಷ್ಮೆ ಸೀರೆ, ಚಿನ್ನದ ಹಾರ, ಓಲೆಯನ್ನು ಗಿಫ್ಟ್ ಮಾಡಿದ್ದ. ಗಿಪ್ಟ್ ಕೊಟ್ಟಿರೋ ಫೋಟೋಸ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಚಿತಾ ರಾಮ್ ಜೊತೆಗೆ ರವಿಚಂದ್ರನ್, ಸುದೀಪ್ ಜೊತೆಗೆ ಜಗ್ಗ ಆಪ್ತನಾಗಿದ್ದ ಎನ್ನಲಾಗಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಬೈರತಿ ಬಸವರಾಜ್ ಹೆಸರು ಕೇಳಿಬಂದಿತ್ತು. ಪೊಲೀಸರು ಅವರನ್ನ ವಿಚಾರಣೆಗೂ ಒಳಪಡಿಸಿದ್ದರು. ಬುಧವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆಯೂ ತನಿಖಾಧಿಕಾರಿ ಸೂಚಿಸಿದ್ದಾರೆ. ಅಲ್ಲದೇ ಎ1 ಜಗ್ಗದೀಶ್ ಸಹಚರರಾದ ಅನಿಲ್, ಅರುಣ್ ಹಾಗೂ ನವೀನ್ ಆರೋಪಿಗಳನ್ನು ಬಂಧಿಸಲಾಗಿದೆ.
https://www.newsics.com/2025/07/21/former-kerala-chief-minister-vs-achuthanandan-passes-away/