newsics.com
ಯುಪಿಐ ಮೂಲಕ ಮಿತಿಗಿಂತ ಹೆಚ್ಚಿನ ಹಣ ಸ್ವೀಕರಿಸಿದ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿ ಮಾಡುವಂತೆ ನೀಡಿರುವ ನೋಟಿಸ್ ಮಂಗಳವಾರ ಹಿಂಪಡೆಯದಿದ್ದರೆ ಜು.23 ರಿಂದ ಎರಡು ದಿನ ರಾಜ್ಯವ್ಯಾಪಿ ಹಾಲು, ಬೇಕರಿ ಉತ್ಪನ್ನ ಮಾರಾಟ ಬಂದ್ ಮಾಡಲಾಗಿದೆ.
ಜುಲೈ 23, 24, 25 ರಂದು ರಾಜ್ಯಾದ್ಯಂತ ಹಾಲು ಹಾಗೂ ಹಾಲಿನ ಉತ್ಪನ್ನ ಮಾರಾಟ ಬಂದ್ ಆಗಲಿದೆ.
40 ಲಕ್ಷ ರೂ.ಗಿಂತ ಹೆಚ್ಚಿನ ವಹಿವಾಟಿಗೆ ಜಿಎಸ್ಟಿ ತೆರಿಗೆ ನೋಟಿಸ್ ಬಂದ ಹಿನ್ನೆಲೆ ವ್ಯಾಪಾರಿಗಳು ಬೆಚ್ಚಿಬಿದ್ದಿದ್ದು, ಯುಪಿಐ ಮೂಲಕ ಹಣ ಸ್ವೀಕಾರಕ್ಕೆ ನಿರಾಕರಿಸುತ್ತಿದ್ದಾರೆ. ಆನ್ ಲೈನ್ ಪೇಮೆಂಟ್ ನೋಡಿ ಟ್ಯಾಕ್ಸ್ ಕಟ್ಟುವಂತೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 40 ರಿಂದ 60 ಲಕ್ಷ ರೂ. 1 ಕೋಟಿವರೆಗೂ ದಂಡ ವಿಧಿಸಿದ್ದು, ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ನಿಂದ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ.