newsics.com
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದೆ.
ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಹಿಂದಿದೆ ಯಾರ್ಯಾರ ಕೈವಾಡವಿದೆ ಎಂದು ಪೊಲೀಸರು ತನಿಖೆ ನಡೆಸ್ತಿದ್ದಾರೆ. ಇದೀಗ ಐವರು ಸುಪಾರಿ ಕಿಲ್ಲರ್ಗಳನ್ನ ಬಂಧಿಸಿದ್ದಾರೆ.
ರೌಡಿಶೀಟರ್ ಬಿಕ್ಲು ಶಿವ ಕೊಲೆ ಮಾಡಲು ಗ್ಯಾಂಗ್ ಒಂದೂವರೆ ಲಕ್ಷ ಹಣ ಸುಪಾರಿ ಪಡೆದಿತ್ತು ಎನ್ನಲಾಗಿದೆ. ನರಸಿಂಹ ಎಂಬಾತನ ಗ್ಯಾಂಗ್ ಕೊಲೆ ಮಾಡಲು ಸುಪಾರಿ ಪಡೆದಿದ್ದಿತ್ತು. ನರಸಿಂಹ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು ಎನ್ನಲಾಗಿದೆ.
ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದ್ದು, ಬೈರತಿ ಬಸವರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಭಾರತಿನಗರ ಠಾಣೆಯಲ್ಲಿ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾಜಿ ಸಚಿವ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ. ಜಗದೀಶ್ ಎ1, ಕಿರಣ್ ಎ2, ವಿಮಲ್ ಎ 3, ಅನಿಲ್ ಎ4 ರೋಪಿಗಳಾಗಿದ್ದಾರೆ.