Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದಲ್ಲಿ ನನ್ನ ಮಕ್ಕಳಿಗೆ ಕೆಲಸ ಸಿಗಲ್ವಾ? ಉದ್ಯೋಗ ಮೀಸಲಾತಿ ಕ್ರಮಕ್ಕೆ ಫೋನ್‌ಪೇ ಸಿಇಒ ಸಮೀರ್ ಸಿಡಿಮಿಡಿ
ಕರ್ನಾಟಕಪ್ರಮುಖ

ಕರ್ನಾಟಕದಲ್ಲಿ ನನ್ನ ಮಕ್ಕಳಿಗೆ ಕೆಲಸ ಸಿಗಲ್ವಾ? ಉದ್ಯೋಗ ಮೀಸಲಾತಿ ಕ್ರಮಕ್ಕೆ ಫೋನ್‌ಪೇ ಸಿಇಒ ಸಮೀರ್ ಸಿಡಿಮಿಡಿ

Share
1 Min Read
SHARE

newsics.com
ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕೆಳ ಸ್ತರದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಪೂರ್ಣ ಮೀಸಲಾತಿ ಕೊಡುವ ಪ್ರಸ್ತಾಪಕ್ಕೆ ಹಲವು ಉದ್ಯಮಿಗಳ ತೀವ್ರ ವಿರೋಧ ವ್ಯಕ್ತವಾಗಿದೆ.

ಫೋನ್‌ಪೇ ಸಂಸ್ಥಾಪಕ ಮತ್ತು ಸಿಇಒ ಸಮೀರ್ ನಿಗಮ್ ತಮ್ಮ ಎಕ್ಸ್ ಪೋಸ್ಟ್ನಲ್ಲಿ ಅವರು ರಾಜ್ಯ ಸರ್ಕಾರದ ನಡೆಯನ್ನು ಬಲವಾಗಿ ಟೀಕಿಸಿದ್ದಾರೆ.

ನನ್ನ ಮಕ್ಕಳು ತಮ್ಮ ಸ್ವಂತ ಊರಿನಲ್ಲಿ ಕೆಲಸಕ್ಕೆ ಸೇರಲು ಅನರ್ಹರಾ ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರ ರೂಪಿಸಿದ ಮಸೂದೆಯನ್ನು ನಾಚಿಕೆಗೇಡಿನ ಕ್ರಮ ಎಂದು ಬಣ್ಣಿಸಿದ್ದಾರೆ.
ನನಗೆ 46 ವರ್ಷ ವಯಸ್ಸಾಗಿದೆ. ಯಾವುದೇ ರಾಜ್ಯದಲ್ಲಿ 15 ವರ್ಷಕ್ಕೂ ಹೆಚ್ಚು ಕಾಲ ವಾಸಿಸಿಲ್ಲ. ನನ್ನ ತಂದೆ ನೌಕಾಪಡೆಯಲ್ಲಿ ಕೆಲಸ ಮಾಡಿದ್ದಾರೆ. ದೇಶಾದ್ಯಂತ ಅವರ ಪೋಸ್ಟಿಂಗ್ ಆಗಿದೆ. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗ ಗಳಿಸಲು ಅರ್ಹರಲ್ಲವಾ? ನಾನು ಕಂಪನಿಗಳನ್ನು ಸ್ಥಾಪಿಸಿದ್ದೇನೆ. ದೇಶಾದ್ಯಂತ 25,000ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸಿದ್ದೇನೆ. ನನ್ನ ಮಕ್ಕಳು ಅವರ ಸ್ವಂತ ನಗರದಲ್ಲಿ ಕೆಲಸ ಮಾಡಲು ಅನರ್ಹರಾ? ಇದು ನಾಚಿಕೆಗೇಡಿತನದ ಸಂಗತಿ’ ಎಂದು ಸಮೀರ್ ನಿಗಮ್ ತಮ್ಮ ಎಕ್ಸ್ ಪೋಸ್ಟ್ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಉದ್ಯಮಿಗಳ ವಿರೋಧಕ್ಕೆ ಬೆಚ್ಚಿದ ಸಿಎಂ ಸಿದ್ದರಾಮಯ್ಯ, ‘ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ.
ಹರ್ಯಾಣ ಮೊದಲಾದ ಕೆಲ ರಾಜ್ಯಗಳು ಇದೇ ರೀತಿಯಲ್ಲಿ ಸ್ಥಳೀಯರಿಗೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮೀಸಲಾತಿ ಕೊಡುವ ಪ್ರಯತ್ನ ಮಾಡಿದ್ದವು. ನ್ಯಾಯಾಲಯಗಳಲ್ಲಿ ಇವುಗಳಿಗೆ ಬೆಂಬಲ ಸಿಕ್ಕಿಲ್ಲ. ರಾಜ್ಯ ಸರ್ಕಾರ ಒಂದು ವೇಳೆ ವಿಧೇಯಕ ತಂದರೂ ಕೋರ್ಟ್ನಲ್ಲಿ ಅದು ರದ್ದುಗೊಳ್ಳುವ ಸಾಧ್ಯತೆಯೇ ಹೆಚ್ಚಿದೆ.

ಉದ್ಯಮಿಗಳ ವಿರೋಧಕ್ಕೆ ಬೆದರಿದ ಸರ್ಕಾರ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಡೆ, ಸಿಎಂ ಮಾಹಿತಿ

ಈ ದಂಪತಿಗೆ ಕತ್ರಿನಾ ಕೈಫೇ ದೇವರು, ನಟಿಗೆ ನಿತ್ಯ ಪೂಜೆ!

ಮಕ್ಕಳೇ ಟಾರ್ಗೆಟ್: ಏನಿದು ಚಂಡೀಪುರ ವೈರಸ್?

TAGGED:Will my children not get job in Karnataka? Phonepe CEO Sameer criticized job reservation measures newsics
Share This Article
Facebook Twitter Copy Link Print
Previous Article ಈ ದಂಪತಿಗೆ ಕತ್ರಿನಾ ಕೈಫೇ ದೇವರು, ನಟಿಗೆ ನಿತ್ಯ ಪೂಜೆ!
Next Article ಪಂಚಾಯ್ತಿಯಿಂದಲೇ ದಲಿತ ಕುಟುಂಬಗಳಿಗೆ ಬಹಿಷ್ಕಾರ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?