newsics.com
ನವದೆಹಲಿ: ಸಿಎಂ ಬದಲಾವಣೆ ಚರ್ಚೆ ನಡುವೆಯೇ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ.
ಒಂದೇ ವಿಮಾನದಲ್ಲಿ ದೆಹಲಿಗೆ ಆಗಮಿಸಿದ್ದ ಸಿಎಂ ಹಾಗೂ ಡಿಸಿಎಂ ಈಗ ಒಟ್ಟಿಗೆ ಕೂತು 20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ.
ಗುರುವಾರ ಸಂಜೆ ಕರ್ನಾಟಕ ಭವನ ಭವನದಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್, ಒಂದೇ ಕಾರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮನೆಗೆ ಆಗಮಿಸಿದರು. ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ 20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಕ್ಕೆ ಒಪ್ಪಿಗೆ ಸಿಕ್ಕಿದೆ.
ಉಪಾಧ್ಯಕ್ಷರು, ಸದಸ್ಯರ ನೇಮಕ ಪ್ರಕ್ರಿಯೆ ಮುಂದಿನ ಹಂತದಲ್ಲಿ ಸಭೆ ಮಾಡಿ ತೀರ್ಮಾನ ಮಾಡಲು ನಾಯಕರು ನಿರ್ಧರಿಸಿದ್ದಾರೆ. ಸಿಎಂ, ಡಿಸಿಎಂ ಬೆಂಗಳೂರಿಗೆ ವಾಪಸ್ ಆಗ್ತಿದ್ದಂತೆ 20 ಅಧ್ಯಕ್ಷರ ಪಟ್ಟಿ ಘೋಷಣೆ ಆಗುವ ಸಾಧ್ಯತೆ ಇದೆ. ಇನ್ನುಳಿದಂತೆ 4 ಎಂಎಲ್ಸಿ ಸ್ಥಾನ ಬಗ್ಗೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ಗೆ ಬಿಡಲಾಗಿದೆ.
Today’s prediction ಇಂದಿನ ರಾಶಿ ಭವಿಷ್ಯ, 25-07-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?