newsics.com
ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಪ್ರಸಿದ್ಧರಾದ ಭಾರತೀಯ ಕ್ರಿಕೆಟಿಗ ಯಶ್ ದಯಾಳ್ ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚೆಗೆ ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯಶ್ ದಯಾಳ್ ಅವರ ಮೇಲೆ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಾರೆ.ಇದೀಗ ಯಶ್ ದಯಾಳ್ ವಿರುದ್ಧ ಮತ್ತೊಬ್ಬ ಹುಡುಗಿ ಅ*ತ್ಯಾ*ಚಾರ ಪ್ರಕರಣ ದಾಖಲಿಸಿದ್ದಾಳೆ.
ಜೈಪುರದಲ್ಲಿ ಸಂತ್ರಸ್ತೆ ಕ್ರಿಕೆಟ್ ಆಡುವಾಗ, ದಯಾಳ್ಗೆ ಪರಿಚಯ ಆಗಿದ್ದಳು. ನಾನು ಕೂಡ ಕ್ರಿಕೆಟ್ ಆಡುತ್ತಿದ್ದೆ. ಆಗ ದಯಾಳ್ ಐಪಿಎಲ್ ಆಡಲು ಜೈಪುರಕ್ಕೆ ಬಂದಿದ್ದರು. ದಯಾಳ್, ನನ್ನ ಕ್ರಿಕೆಟ್ ಕರಿಯರ್ ಬಗ್ಗೆ ಸಲಹೆ ನೀಡುವ ನೆಪದಲ್ಲಿ ಹೋಟೆಲ್ಗೆ ಕರೆದುಕೊಂಡು ಹೋಗಿದ್ದರು. ಆಗ ನಾನು ಅಪ್ರಾಪ್ತ ವಯಸ್ಕಳಾಗಿದ್ದೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ನಂತರ ನಾವಿಬ್ಬರು ಎರಡು ವರ್ಷಗಳ ಕಾಲ ಸಂಪರ್ಕದಲ್ಲಿದ್ದೇವು. ಅವರು ನನಗೆ ಬ್ಲ್ಯಾಕ್ಮೇಲ್ ಮಾಡಿ ನಿರಂತರ ಶೋಷಣೆ ಮಾಡುತ್ತಿದ್ದರು ಎಂದು ಆರೋಪಿಸಿದ್ದಾಳೆ.
ಜೈಪುರದ ಸಂಗನೇರ್ ಸದರ್ ಪೊಲೀಸ್ ಠಾಣೆಯಲ್ಲಿ ದಯಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
https://www.newsics.com/2025/07/25/historic-fort-collapses-due-to-heavy-rain/