newsics.com
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಇಂದು ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯ ಜಾಮೀನು ನೀಡಲು ನಿರಾಕರಣೆ ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಈ ಆದೇಶ ಹೊರಡಿಸಿದ್ದಾರೆ.
ಕಳೆದ 14 ತಿಂಗಳುಗಳಿಂದ ಪ್ರಜ್ವಲ್ ರೇವಣ್ಣ ಅವರು ಜೈಲಿನಲ್ಲಿದ್ದಾರೆ. ಹೀಗಾಗಿ ಬೇಲ್ಗಾಗಿ ಕೋರ್ಟ್ಗೆ ಮನವಿ ಮಾಡಿದ್ದರು. ಆದರೆ ಕೋರ್ಟ್ ಬೇಲ್ ನೀಡಿಲ್ಲ.