newsics.com
ಭಾರತದ ಅನುಭವಿ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದಾರೆ.
2011ರಲ್ಲಿ ಕೇವಲ 18ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಕಡೂರು ಮೂಲದ ವೇದಾ ಕೃಷ್ಣಮೂರ್ತಿ ಇದೀಗ ಸ್ಮರ್ಧಾತ್ಮಕ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದಾರೆ.
ಆಕ್ರಮಣಕಾರಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಆಗಿರುವ ವೇದಾ, ಭಾರತ ಪರ 48 ಏಕದಿನ ಮತ್ತು 76 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಕೊನೆಯ ಬಾರಿಗೆ ಎಂಸಿಜಿಯಲ್ಲಿ ನಡೆದ 2020 ಟಿ20 ವಿಶ್ವಕಪ್ ಫೈನಲ್ನಲ್ಲಿ ದೇಶವನ್ನು ಪ್ರತಿನಿಧಿಸಿದ್ದರು, ಆದರೆ ಭಾರತಕ್ಕಾಗಿ ಅವರ ಕೊನೆಯ ಏಕದಿನ ಪಂದ್ಯವು ಸುಮಾರು ಎರಡು ವರ್ಷಗಳ ಮೊದಲು, ಏಪ್ರಿಲ್ 2018 ರಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧವಾಗಿತ್ತು. ವೇದಾ 50 ಓವರ್ಗಳ ಸ್ವರೂಪದಲ್ಲಿ 829 ರನ್ಗಳು ಮತ್ತು ಮೂರು ವಿಕೆಟ್ಗಳೊಂದಿಗೆ ಮತ್ತು ಕಡಿಮೆ ಸ್ವರೂಪದಲ್ಲಿ 875 ರನ್ಗಳೊಂದಿಗೆ ನಿವೃತ್ತರಾದರು.
2011ರಲ್ಲಿ ಕೇವಲ 18ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಕಡೂರು ಮೂಲದ ವೇದಾ ಕೃಷ್ಣಮೂರ್ತಿ ಇದೀಗ ಸ್ಮರ್ಧಾತ್ಮಕ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದಾರೆ. ಸಣ್ಣ ಹಳ್ಳಿಯಿಂದ ಬಂದ ಆಟಗಾರ್ತಿ, ಇಡೀ ಕ್ರಿಕೆಟ್ ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದ ವೇದಾ ಇದೀಗ ಭಾವನಾತ್ಮಕ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ. ಚಿಕ್ಕಮಗಳೂರಿನ ಸಣ್ಣ ನಗರ ಕಡೂರಿನಿಂದ ಬಂದ ವೇದಾ ಕೃಷ್ಣಮೂರ್ತಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಹೆಜ್ಜೆಗುರುತುಗಳನ್ನು ದಾಖಲಿಸುವ ಮೂಲಕ ಹಲವು ಸಣ್ಣ ನಗರದ ಯುವತಿಯರಿಗೆ ಸ್ಪೂರ್ತಿಯಾಗಿದ್ದಾರೆ ಎಂದರೆ ಅತಿಶಯೋಕ್ತಿಯಲ್ಲ.
https://www.instagram.com/p/DMhy4h8hAYz/?igsh=MWpxeWh1OWplM2VsZw==