newsics.com
ಮಾಕಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು,ಆಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತೇನೆ ಎಂದು ಗಂಡನನ್ನೇ ಪತ್ನಿಯೇ ಕೊಲೆ ಮಾಡಿಸಿದ್ದಾಳೆ.ಈಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಮಾಕಳಿ ಗ್ರಾಮದಲ್ಲಿ ನಡೆದಿದೆ.
ಕಳೆದ ಜೂ.೨೪ರಂದು ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿ ಗ್ರಾಮದಲ್ಲಿ ಗ್ರಾ.ಪಂ ಸದಸ್ಯೆ ಚಂದ್ರಕಲಾ ಪತಿ ಲೋಕೇಶ್ (೪೫) ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಲೋಕೇಶ್ ಶವದ ಬಳಿ ವಿಷದ ಬಾಟಲಿ ಇಟ್ಟು,ಆತ್ಮಹತ್ಯೆಯಂತೆ ಬಿಂಬಿಸಲಾಗಿತ್ತು. ಈ ಸಂಬಂಧ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮೃತ ವ್ಯಕ್ತಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಲೋಕೇಶ್ ಆಗಿದ್ದು, ವ್ಯವಸಾಯದ ಜೊತೆಗೆ ಜೆಡಿಎಸ್ನಲ್ಲಿ ಗುರುತಿಸಿಕೊಂಡಿದ್ದ. ಅಲ್ಲದೆ, ಬೆಂಗಳೂರಿನಲ್ಲಿ ಎರಡ್ಮೂರು ಕೋಳಿ ಅಂಗಡಿಗಳನ್ನು ಇಟ್ಟುಕೊಂಡು ಸಾಕಷ್ಟು ಸಿರಿವಂತನಾಗಿದ್ದ. ಜೊತೆಗೆ ಪತ್ನಿ ಚಂದ್ರಕಲಾಳನ್ನು ಕೂಡ ಎರಡು ಬಾರಿ ಮಾಕಳಿ ಗ್ರಾಮಪಂಚಾಯತಿ ಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬಂದಿದ್ದ.
ಚಂದ್ರಕಲಾಳಿಗೆ ಬೆಂಗಳೂರಿನ ಅಂಚೆ ಇಲಾಖೆ ನೌಕರ ಯೋಗೇಶ್ ಎಂಬಾತನ ಜೊತೆ ಆಕ್ರಮ ಸಂಬಂಧ ಬೆಳೆದಿದೆ. ಮತ್ತೊಂದೆಡೆಮ ಬೆಂಗಳೂರಿನಲ್ಲಿ ಇದ್ದ ಸೈಟ್ ಅನ್ನು ಮಾರಾಟ ಮಾಡಬೇಕು ಎಂದು ಲೋಕೇಶ್ ಯೋಚಿಸುತ್ತಿದ್ದ. ಈ ವಿಚಾರವಾಗಿ ಕಳೆದ ಹಲವು ತಿಂಗಳಿಂದ ಇಬ್ಬರ ನಡುವೆ ಸಾಕಷ್ಟು ಗಲಾಟೆ ನಡೆದಿತ್ತು
ಏಳು ತಿಂಗಳ ಹಿಂದೆಯೇ ಸ್ಕೇಚ್ ಹಾಕಿ ಈ ಮೊದಲು ಎರಡು ಲಕ್ಷ ರೂಪಾಯಿಗೆ ಸುಪಾರಿ ನೀಡಿರುತ್ತಾಳೆ. ಆದರೆ ಅದು ಯಶಸ್ವಿ ಆಗಿರಿಲಿಲ್ಲ. ದುಡ್ಡು ಪಡೆದಿದ್ದ ಆರೋಪಿ ಪರಾರಿಯಾಗಿದ್ದಾನೆ. ಹೀಗಾಗಿ ಮತ್ತೆ ಏಳು ತಿಂಗಳ ನಂತರ ಎರಡನೇ ಬಾರಿಗೆ ಪ್ರಯತ್ನ ಮಾಡುತ್ತಾಳೆ. ಪ್ರಿಯಕರ ಯೋಗೇಶ್ಗೆ ಮೂರುವರೆ ಲಕ್ಷ ರೂಪಾಯಿಗೆ ಸುಪಾರಿ ನೀಡುತ್ತಾಳೆ. ಮೂಲತಃ ಮಂಡ್ಯ ಜಿಲ್ಲೆ ನವಿಲೆ ಗ್ರಾಮದ ಯೋಗೇಶ್, ಕ್ರಿಮಿನಲ್ ಹಿನ್ನೆಲೆಯುಳ್ಳ ಸೂರ್ಯ, ಶಿವಲಿಂಗ, ಚಂದನ್ ಹಾಗೂ ಶಾಂತರಾಜು ಎಂಬ ನಾಲ್ಕು ಜನರನ್ನ ಜೊತೆಗೆ ಕರೆದುಕೊಂಡು ಜೂನ್ 23 ರ ಸಂಜೆ ಬೆಂಗಳೂರಿನಿಂದ ಮಾಕಳಿ ಗ್ರಾಮಕ್ಕೆ ಬರುತ್ತಿದ್ದ ಲೋಕೇಶ್ನನ್ನು ಎಂಕೆ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯ ಖ್ಯಾಸಪುರ ಗ್ರಾಮದ ಬಳಿ ಕಾರು ಅಡ್ಡಹಾಕಿ ಆನಂತರ ರಸ್ತೆಯಿಂದ ನಿರ್ಜನ ಪ್ರದೇಶಕ್ಕೆ ಕರೆದ್ಯೋಯ್ದು ಬಲವಂತವಾಗಿ ವಿಷಕುಡಿಸಿ, ಹತ್ಯೆ ಮಾಡಿ ಪರಾರಿಯಾಗಿದ್ದರು.