Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > UPI New Rules ಯುಪಿಐ ಬಳಸುವ ಮುನ್ನ ಇರಲಿ ಎಚ್ಚರ: ಆಗಸ್ಟ್ 1ರಿಂದ ಹೊಸ ನಿಯಮ ಜಾರಿ
ದೇಶ

UPI New Rules ಯುಪಿಐ ಬಳಸುವ ಮುನ್ನ ಇರಲಿ ಎಚ್ಚರ: ಆಗಸ್ಟ್ 1ರಿಂದ ಹೊಸ ನಿಯಮ ಜಾರಿ

Share
2 Min Read
SHARE

newsics.com

ನವದೆಹಲಿ: ಯುಪಿಐ ಬಳಕೆದಾರರಿಗೆ ಹೊಸ ನಿಯಮಗಳು ಜಾರಿಯಾಗಲಿವೆ.ಆಗಸ್ಟ್ 1 ರಿಂದ ಯೂನಿಫೈಡ್ ಪೇಮೆಂಟ್ ಇಂಟರ್ಫೇಸ್(ಯುಪಿಐ) ವ್ಯವಸ್ಥೆಯಲ್ಲಿ ಹಲವು ಬದಲಾವಣೆ ಜಾರಿಗೆ ಬರಲಿವೆ.

ಫೋನ್ ಪೇ, ಗೂಗಲ್ ಪೇ, ಪೇಟಿಂನಂತಹ ಯುಪಿಐ ಆಧಾರಿತ ಬಳಕೆದಾರರಿಗೆ ಬದಲಾವಣೆ ಅನ್ವಯವಾಗಲಿದೆ ಎಂದು ಹೇಳಲಾಗಿದೆ.

ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಪ್ರಕಾರ, ಏಪ್ರಿಲ್ ಮತ್ತು ಮೇ 2025 ರಲ್ಲಿ ಯುಪಿಐನಲ್ಲಿ ಸ್ವಲ್ಪ ಸಮಸ್ಯೆಗಳಾಗಿದ್ದವು. ಜನರು ಪದೇ ಪದೇ ಬ್ಯಾಲೆನ್ಸ್ ಚೆಕ್ ಮಾಡುತ್ತಿದ್ದರು ಮತ್ತು ವಹಿವಾಟಿನ ಸ್ಥಿತಿಯನ್ನು ನೋಡುತ್ತಿದ್ದರು. ಇದರಿಂದ ಸರ್ವರ್ ಮೇಲೆ ಒತ್ತಡ ಹೆಚ್ಚಾಗಿ ವಹಿವಾಟುಗಳು ನಿಧಾನವಾಗುತ್ತಿದ್ದವು ಅಥವಾ ಫೇಲ್ ಆಗುತ್ತಿದ್ದವು. ಹಾಗಾಗಿ, ವ್ಯವಸ್ಥೆಯನ್ನು ಉತ್ತಮಗೊಳಿಸಲು ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತದೆ.

ಹೊಸ ನಿಯಮಗಳೇನು?

ಆಟೋ ಪೇಗೆ ನಿಗದಿತ ಸಮಯ, ವಹಿವಾಟು ಸ್ಟೇಟಸ್ ಚೆಕಿಂಗ್ ಗೆ ನಿರ್ಬಂಧ, ಪೇಮೆಂಟ್ ರಿಹರ್ಸಲ್‌ಗೆ ಮಿತಿ ಸೇರಿ ಹಲವು ಬದಲಾವಣೆಯಾಗಲಿವೆ.

ಹೊಸ ನಿಯಮದ ಪ್ರಕಾರ ನಿತ್ಯ ಬ್ಯಾಲೆನ್ಸ್ ತಿಳಿಯಲು ಇನ್ನು ಮುಂದೆ ಮಿತಿ ಇರಲಿದೆ. ಒಂದು ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನು ದಿನಕ್ಕೆ 25 ಬಾರಿ ಮಾತ್ರ ವೀಕ್ಷಣೆ ಮಾಡಬಹುದು.

ನೆಟ್ ಫ್ಲಿಕ್ಸ್, ಯುಟ್ಯೂಬ್ ಸಬ್ಸ್ಕ್ರಿಪ್ಷನ್, ಮ್ಯೂಚುವಲ್ ಫಂಡ್, ಎಸ್ಐಪಿ, ಇಎಂಐ, ಯುಟಿಲಿಟಿ ಬಿಲ್ ಮೊದಲಾದವುಗಳಿಗೆ ಸಂಬಂಧಿಸಿದ ಆಟೋ ಪೇ ಇನ್ನು ಮುಂದೆ ನಿಗದಿತ ಸಮಯದ ಸ್ಲಾಟ್ ಗಳಲ್ಲಿ ಮಾತ್ರ ನಡೆಯಲಿದೆ. ಬೆಳಗ್ಗೆ 10 ಗಂಟೆಯ ಮೊದಲು, ಮಧ್ಯಾಹ್ನ 1 ಗಂಟೆಯಿಂದ ಸಂಜೆ 5 ಗಂಟೆಯವರೆಗೆ, ರಾತ್ರಿ 9:30 ನಂತರ ಮಾತ್ರ ಇನ್ನು ಮುಂದೆ ಆಟೋ ಪೇ ನಡೆಯಲಿದೆ. ಇದರಿಂದ ಪೀಕ್ ಅವರ್ ಗಳಲ್ಲಿ ಸರ್ವರ್ ಮೇಲಿನ ಒತ್ತಡ ಕಡಿಮೆಯಾಗುತ್ತದೆ.

ವಹಿವಾಟಿನ ಸ್ಥಿತಿಯನ್ನು ಪರಿಶೀಲಿಸುವುದಕ್ಕೂ ಮಿತಿ ಇರುತ್ತದೆ, ಏಕೆಂದರೆ ನೀವು ವಹಿವಾಟಿನ ಸ್ಥಿತಿಯನ್ನು 3 ಬಾರಿ ಮಾತ್ರ ಪರಿಶೀಲಿಸಲು ಅನುಮತಿಸಲಾಗುತ್ತದೆ. ಪ್ರತಿ ಚೆಕ್ ನಡುವೆ ಕನಿಷ್ಠ 90 ಸೆಕೆಂಡುಗಳ ಅಂತರವಿರಬೇಕು.

ಒಬ್ಬ ಬಳಕೆದಾರ 30 ದಿನದಲ್ಲಿ ಕೇವಲ 10 ಬಾರಿ ಪೇಮೆಂಟ್ ರಿಹರ್ಸಲ್ ವಿನಂತಿ ಸಲ್ಲಿಸಬಹುದು. ಒಬ್ಬನೇ ವ್ಯಕ್ತಿ ಅಥವಾ ಸಂಸ್ಥೆಗೆ ಐದು ಬಾರಿ ಮಾತ್ರ ಸಲ್ಲಿಸಬಹುದಾಗಿದೆ.
ಫೋನ್ ಪೇ, ಗೂಗಲ್ ಪೇ ನಲ್ಲಿ ಒಂದು ದಿನದಲ್ಲಿ ಗರಿಷ್ಠ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್ ಮಾಡಬೇಕು. ಒಂದು ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನು ದಿನಕ್ಕೆ 25 ಬಾರಿ ಮಾತ್ರ ವೀಕ್ಷಣೆ ಮಾಡಬಹುದಾಗಿರುತ್ತದೆ.

ಈ ತಿಂಗಳ ಆರಂಭದಿಂದ ಜಾರಿಯಲ್ಲಿರುವ ನಿಯಮದ ಪ್ರಕಾರ ಹಣ ಕಳುಹಿಸುವ ಮೊದಲು ರಿಸೀವರ್ ಬ್ಯಾಂಕ್ ಹೆಸರು ಡಿಸ್ ಪ್ಲೇ ಆಗುತ್ತದೆ. ಇದು ತಪ್ಪು ಖಾತೆಗೆ ಹಣ ಕಳುಹಿಸುವ ಸಾಧ್ಯತೆಯನ್ನು ಕಡಿಮೆ ಮಾಡಲಿದೆ.

ಇನ್ನು ಯುಪಿಐ ವಹಿವಾಟು ಬಳಕೆದಾರರಿಗೆ ಉಚಿತವಾಗಿದ್ದರೂ ಅದರ ಖರ್ಚನ್ನು ಬ್ಯಾಂಕುಗಳು ಇತರ ಪಾಲುದಾರರಿಗೆ ಸರ್ಕಾರವೇ ಭರಿಸುತ್ತಿದೆ. ಯುಪಿಐ ವ್ಯವಸ್ಥೆ ಆರ್ಥಿಕವಾಗಿ ಕಾರ್ಯಸಾಧ್ಯ ಆಗಿರಲು ಭವಿಷ್ಯದಲ್ಲಿ ಉಚಿತ ವಹಿವಾಟನ್ನು ನಿಲ್ಲಿಸಬೇಕಾಗಬಹುದು ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.

https://www.newsics.com/2025/07/27/attack-at-walmart-11-people-stabbed/

TAGGED:#UPI #New #Rules #delhi #payment
Share This Article
Facebook Twitter Copy Link Print
Previous Article ವಾಲ್​​ಮಾರ್ಟ್​​ನಲ್ಲಿ ದಾಳಿ; 11 ಮಂದಿಗೆ ಚಾಕು ಇರಿತ!
Next Article Stampede at Manasa Devi Temple in Haridwar ಹರಿದ್ವಾರದ ಮಾನಸಾದೇವಿ ಮಂದಿರದಲ್ಲಿ ಕಾಲ್ತುಳಿತ: 7 ಜನರು ಸಾವು, ಹಲವರಿಗೆ ಗಾಯ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?