newsics.com
ರಾಯಗಢ: ಖಾಂಡೇರಿಯಿಂದ ಅಲಿಬಾಗ್ ಬಳಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.
ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ. ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಬಿದ್ದಿದೆ. ದೋಣಿಯಲ್ಲಿ ೮ ಮೀನುಗಾರರು ಇದ್ದರು. ಈಜಿ ದಡ ಸೇರಿರುವ ಐವರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು, ರಕ್ಷಣ ಅತಂಡ ದೌಡಾಯಿಸಿದ್ದು, ನಾಪತ್ತೆಯಾಗಿರುವ ಮೀನುಗಾರರಿಗೆ ಶೋಧ ನಡೆಸಲಾಗುತ್ತಿದೆ.