Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳದಲ್ಲಿ ನಿಗೂಢ ಸಾವು ಪ್ರಕರಣ: ನೇತ್ರಾವತಿ ಸ್ನಾನಘಟ್ಟ ಬಳಿ ಸಮಾಧಿ ಅಗೆಯುವ ಕಾರ್ಯ ಆರಂಭಿಸಿದ SIT, ಮೊದಲ ಜಾಗದಲ್ಲಿ ಏನೂ ಸಿಗಲಿಲ್ಲ!
ಕರ್ನಾಟಕಪ್ರಮುಖ

ಧರ್ಮಸ್ಥಳದಲ್ಲಿ ನಿಗೂಢ ಸಾವು ಪ್ರಕರಣ: ನೇತ್ರಾವತಿ ಸ್ನಾನಘಟ್ಟ ಬಳಿ ಸಮಾಧಿ ಅಗೆಯುವ ಕಾರ್ಯ ಆರಂಭಿಸಿದ SIT, ಮೊದಲ ಜಾಗದಲ್ಲಿ ಏನೂ ಸಿಗಲಿಲ್ಲ!

Share
2 Min Read
SHARE

newsics.com

ಬೆಂಗಳೂರು : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಶವಗಳನ್ನು ಹೂತು ಹಾಕಿರುವುದಾಗಿ ಹೇಳಲಾದ ಸ್ಥಳಗಳಲ್ಲಿ ಮಹಜರು ನಡೆಸಲಾಗಿದ್ದು, ಒಟ್ಟು 13 ಜಾಗಗಳನ್ನು ದೂರುದಾರ ತೋರಿಸಿದ್ದಾರೆ.

ನಿನ್ನೆ ಧರ್ಮಸ್ಥಳ ಗ್ರಾಮದ ಬೇರೆ ಬೇರೆ ಕಡೆಗಳಲ್ಲಿ ಶವ ಹೂತಿಟ್ಟ 13 ಜಾಗಗಳನ್ನ ಗುರುತು ಮಾಡಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಆತನನ್ನು ಧರ್ಮಸ್ಥಳದ ನೇತ್ರಾವತಿ ಸ್ಥಾನಘಟ್ಟದ ಬಳಿ ಕರೆ ತಂದು, ಸ್ನಾನಘಟ್ಟದ ಎಡ ಬದಿಯಲ್ಲಿ ಎರಡು ಗಂಟೆಗಳ ಕಾಲ ಒಂದು ಕಿಲೋಮೀಟರ್ ಸಾಗಿ ಒಟ್ಟು 8 ಸ್ಥಳಗಳನ್ನ ಗುರುತಿಸಲಾಗಿತ್ತು. ಬಳಿಕ ನೇತ್ರಾವತಿ ಸ್ನಾನಘಟ್ಟ ಹಾಗೂ ನೇತ್ರಾವತಿ ಸೇತುವೆಯ ಮಧ್ಯಭಾಗದ ಅರಣ್ಯ ಪ್ರದೇಶದಲ್ಲಿ ನಾಲ್ಕು ಜಾಗಗಳನ್ನ ಗುರುತಿಸಲಾಗಿದೆ.
ಮೊದಲು ಗುರುತು ಮಾಡಿದ್ದ ಸ್ಥಳದಿಂದಲೇ ಸಮಾಧಿ ಅಗೆಯುವ ಕೆಲಸಕ್ಕೆ ಎಸ್‌ಐಟಿ ಮುಂದಾಗಿದೆ. ಅದಕ್ಕಾಗಿ 12 ಕಾರ್ಮಿಕರನ್ನು ನಿಯೋಜನೆ ಮಾಡಿಕೊಂಡಿದೆ ವಿಶೇಷ ತನಿಖಾ ತಂಡ. ಗ್ರಾಮ ಪಂಚಾಯಿತಿಯಿಂದ 12 ಕಾರ್ಮಿಕರನ್ನ ನಿಯೋಜನೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಧರ್ಮಸ್ಥಳ ಗ್ರಾಪಂ ನಿಂದ ಉತ್ಖನನಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ. ಸ್ಟೆಲ್ಲಾ ವರ್ಗೀಸ್, ಕಂದಾಯ ಇಲಾಖೆ ಇತರ ಸಿಬ್ಬಂದಿಗಳೂ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಇಂದಿನಿಂದ ಸಮಾಧಿ ಅಗೆಯುವ ಕಾರ್ಯ ಶುರುವಾಗಲಿದೆ.
ಬಳಿಕ ನೇತ್ರಾವತಿ ಸ್ನಾನಘಟ್ಟದ ಬಲ ಬದಿಯಲ್ಲಿದ್ದ ಅಜಿಕುರಿ ರಸ್ತೆ ಬದಿಯ ಜಾಗದಲ್ಲೂ ಶವ ಹೂತಿಟ್ಟಿರೋದಾಗಿ ಅನಾಮಿಕ ವ್ಯಕ್ತಿ ಗುರುತಿಸಿದ್ದಾರೆ. ಸೋಮವಾರ ಒಟ್ಟು 15 ಸ್ಥಳಗಳನ್ನು ಗುರುತಿಸುವ ತಯಾರಿ ಎಸ್‌ಐಟಿ ನಡೆಸಿದ್ದರೂ ಕತ್ತಲಾದ ಹಿನ್ನೆಲೆಯಲ್ಲಿ 13 ಸ್ಥಳಗಳನ್ನ ಮಾತ್ರ ಗುರುತಿಸಲಾಗಿತ್ತು. ನೇತ್ರಾವತಿ ಸ್ನಾನಘಟ್ಟದ ಬಳಿ ಈಗಾಗಲೇ ಸಿಬ್ಬಂದಿಗಳು ‌ಬಂದಿದ್ದು, 12 ಕಾರ್ಮಿಕರ ತಂಡ ಆರೆ, ಪಿಕಾಸಿ, ಗುದ್ದಲಿ ಜೊತೆಗೆ ಸಮಾಧಿ ಅಗೆಯಲು ಬೇಕಾದ ಎಲ್ಲ ಸಾಮಗ್ರಿಗಳನ್ನು ಸಜ್ಜುಗೊಳಿಸಲಾಗಿದೆ. ಅಲ್ಲದೇ ನಾಲ್ವರು ವೈದ್ಯರು, ಸಹಾಯಕ ಸಿಬ್ಬಂದಿ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಕೆಲವೇ ಕ್ಷಣಗಳಲ್ಲಿ ಇವರೆಲ್ಲರ ಸಮಕ್ಷಮದಲ್ಲಿ ಸಮಾಧಿ ಅಗೆಯುವ ಕೆಲಸ ಶುರುವಾಗಿದ್ದು, ಮೊದಲ ಜಾಗದಲ್ಲಿ ಏನೂ ಸಿಕ್ಕಿಲ್ಲ.
ಮಹಜರಿನ ಮೊದಲ ದಿನ 13 ಸ್ಥಳಗಳನ್ನು ಗುರುತಿಸಿದ ಸ್ಥಳಗಳ ದಾಖಲೀಕರಣ ಮಾಡಿದ ಎಸ್‌ಐಟಿ ಟೀಮ್ ಗುರುತಿಸಿದ ಎಲ್ಲಾ ಸ್ಥಳಗಳಲ್ಲಿ ಬಿಗಿ ಭದ್ರತೆ ಮಾಡಿದೆ. ಗುರುತಿಸಿದ ಪ್ರತಿ ಸ್ಥಳಕ್ಕೂ ತಲಾ 2 ಮಂದಿ ಶಸ್ತ್ರಸಜ್ಜಿತ ಸಿಬ್ಬಂದಿಗಳನ್ನ ನೇಮಕ ಮಾಡಿದ್ದು, ದಟ್ಟ ಅರಣ್ಯದಲ್ಲಿ ರಾತ್ರಿ ಹಗಲು ಸರ್ಪಗಾವಲು ಹಾಕಿದೆ. ಗುರುತಿಸಿದ ಜಾಗಗಳಿಗೆ ಟೇಪ್ ಹಾಕಿ, ಎಲ್ಲದಕ್ಕೂ ನಂಬರ್ ನೀಡಲಾಗಿದೆ. ಇಂದು ಮತ್ತೆ ಉಳಿದಿರೋ ಜಾಗಗಳ ಗುರುತಿಸುವ ಕೆಲಸ ನಡೆಯಲಿದ್ದು, ಬಳಿಕ ಎಲ್ಲವನ್ನ ಅಗೆಯುವ ತೀರ್ಮಾನವನ್ನು ಎಸ್‌ಐಟಿ ಮಾಡಿದೆ.

Gold Rate Today Bangalore: ಗುಡ್ ನ್ಯೂಸ್; ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ

TAGGED:Mysterious death case in Dharmasthala: SIT begins work on grave digging near Netravati bathing pond
Share This Article
Facebook Twitter Copy Link Print
Previous Article ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಬಾಲಕಿ‌ ಮೇಲೆ ಅತ್ಯಾ*ಚಾರ: ಸಿಬ್ಬಂದಿ ಬಂಧನ
Next Article ನಟಿ ರಮ್ಯಾ ಬೆಂಬಲಕ್ಕೆ ನಿಂತ ನಟ ಶಿವರಾಜ್ ಕುಮಾರ್ ದಂಪತಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?