Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒತ್ತಾಯಿಸಿ ಪ್ರತಿಭಟನೆ, Phonepe ವಿರುದ್ಧ ಅಭಿಯಾನ
ಕರ್ನಾಟಕಪ್ರಮುಖ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒತ್ತಾಯಿಸಿ ಪ್ರತಿಭಟನೆ, Phonepe ವಿರುದ್ಧ ಅಭಿಯಾನ

Share
2 Min Read
SHARE

newsics.com

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವ ಹೊತ್ತಿನಲ್ಲೇ ಕನ್ನಡಪರ ಸಂಘಟನೆಗಳು Phonepe ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, #Boycott ಅಭಿಯಾನ ಆರಂಭಿಸಿವೆ.

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ ಜಾರಿಗೆ ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಕಾಯ್ದೆ ಜಾರಿ ಮಾಡುವುದಾಗಿ ಹೇಳಿದ ಬೆನ್ನಲ್ಲೇ ನಿರ್ಧಾರ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಖಾಸಗಿ ಕಂಪನಿಗಳ ಒತ್ತಡಕ್ಕೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮಣಿಯಬಾರದು. ಶೀಘ್ರವೇ ಮಸೂದೆ ಜಾರಿಗೊಳಿಸಬೇಕೆಂದು ಕನ್ನಡಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆದಿದ್ದು, ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈಗೆ ಕನ್ನಡದ ನೆಲ, ಜಲ ಬೇಕು. ಆದರೆ, ಕನ್ನಡಿಗರಿಗೆ ನೌಕರಿ ಕೊಡಿ ಎಂದರೆ ಇವರಿಗೆ ತೊಂದರೆ. ನಾವು ಮುಂದಿನ ದಿನಗಳಲ್ಲಿ ಅವರ ಕಂಪನಿಗಳಿಗೆ ಮುತ್ತಿಗೆ ಹಾಕುತ್ತೇವೆ. ಸಿಎಂ ಸಿದ್ದರಾಮಯ್ಯ ಮಸೂದೆ ಜಾರಿಗೆ ತರದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆ ವೇಳೆ ಉಧ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್‌ ದಾಸ್‌ ಪೈ ಮತ್ತು ಫೋನ್ ಪೇ ಸಂಸ್ಥೆಯ ಭಾವಚಿತ್ರ ಹಿಡಿದು ಕಾರ್ಯಕರ್ತರು ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಕನ್ನಡಿಗರಿಗೆ ಮೀಸಲಾತಿ ಕಾಯ್ದೆಗೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ‘ಫೋನ್ ಪೇʼ ಬಾಯ್ಕಾಟ್ ಅಭಿಯಾನ (‘PhonePe’ boycott campaign) ಶುರುವಾಗಿದೆ.

ಕನ್ನಡಿಗರ ವಿರೋಧಿ ಸಮೀರ್ ನಿಗಮ್ ರ ಫೋನ್ ಪೇಯನ್ನು ಮೊಬೈಲ್‌ನಿಂದ ತೆಗೆದುಹಾಕುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರುವಾಗಿದೆ. ಕನ್ನಡಿಗರ ವಿಷಯದಲ್ಲಿ ಫೋನ್ ಪೇ ಸಿಇಒ ಸಮೀರ್ ನಿಗಮ್ ಉದ್ಧಟತನ ತೋರಿದ್ದಾರೆ. ಹೀಗಾಗಿ ಫೋನ್‌ ಪೇ ಆ್ಯಪ್ ಅನ್ನು ಯಾರೂ ಬಳಸಬೇಡಿ. 1 ರೇಟಿಂಗ್ ನೀಡಿದ ಬಳಿಕ ಆ್ಯಪ್ ಡಿಲಿಟ್ ಮಾಡುವಂತೆ ಅಭಿಯಾನ ಶುರು ಮಾಡಲಾಗಿದೆ.

https://x.com/karnatabala/status/1814160336746111380?t=CnDNOVJgA6n_dXADSqFOqQ&s=19

ಮೈಕ್ರೋಸಾಫ್ಟ್ ಸೇವೆಯಲ್ಲಿ ತಾಂತ್ರಿಕ ಸಮಸ್ಯೆ: ಜಗತ್ತಿನ ಹಲವೆಡೆ ಕಲ್ಲೋಲ ಕಾರಣವೇನು..?

ಒಮ್ಮತದ ದೈಹಿಕ ಸಂಬಂಧ ಅತ್ಯಾಚಾರ ಅಲ್ಲ – ಕರ್ನಾಟಕ ಹೈಕೋರ್ಟ್‌

ಮಂಗಳೂರು ಪಾಲಿಕೆ ಆಯುಕ್ತ ಸೇರಿ 13 ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ

TAGGED:campaign against PhonepeProtest demanding job reservation for Kannadigas
Share This Article
Facebook Twitter Copy Link Print
Previous Article ಮೈಕ್ರೋಸಾಫ್ಟ್ ಸೇವೆಯಲ್ಲಿ ತಾಂತ್ರಿಕ ಸಮಸ್ಯೆ: ಜಗತ್ತಿನ ಹಲವೆಡೆ ಕಲ್ಲೋಲ ಕಾರಣವೇನು..?
Next Article ಪತ್ನಿಯೆಂದು ಭಾವಿಸಿ ವೇದಿಕೆಯಲ್ಲೇ ಅನ್ಯ‌ ಮಹಿಳೆಗೆ ಮುತ್ತಿಕ್ಕಲು ಹೋದ ಜೋ ಬೈಡೆನ್! ವಿಡಿಯೊ ನೋಡಿ

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?