newsics.com
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರು ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದ್ದಾರೆ.
ವಿಧಾನಸೌಧದ ಮುಖ್ಯಕಾರ್ಯದರ್ಶಿಗಳ ಕೊಠಡಿಯಲ್ಲಿ ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವರದಿ ಸ್ವೀಕರಿಸಿದರು. ನ್ಯಾ.ಪಿ.ಎನ್.ದೇಸಾಯಿ ಏಕಸದಸ್ಯ ಆಯೋಗ ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದೆ.
ಸುಪ್ರೀಂಕೋರ್ಟ್ ಬಳಿಕ ಈಗ ದೇಸಾಯಿ ಕಮಿಟಿಯಿಂದಲೂ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರಿಗೆ ಮುಡಾ ಕೇಸ್ನಲ್ಲಿ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿತ್ತು. ಇದರ ಬೆನ್ನಲ್ಲೇ ಈಗ ನ್ಯಾ. ದೇಸಾಯಿ ಕಮಿಟಿ ಕೂಡ ಕ್ಲೀನ್ ಚಿಟ್ ನೀಡಿದೆ
ಇನ್ನು ಸಲ್ಲಿಸಿರುವ ವರದಿಯಲ್ಲಿ 14 ಮುಡಾ ಸೈಟ್ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಸಿದ್ದರಾಮಯ್ಯ ತಮ್ಮ ಅಧಿಕಾರ ಬಳಸಿರುವುದು ಕಂಡು ಬಂದಿಲ್ಲ. ತಮ್ಮ ಅಧಿಕಾರ ಬಳಸಿರುವುದಕ್ಕೆ ಸೂಕ್ತ ಪುರಾವೆ ಇಲ್ಲ ಎಂದೂ ನ್ಯಾ. ದೇಸಾಯಿ ಕಮಿಟಿ ವರದಿಯಲ್ಲಿ ಸ್ಪಷ್ಟಪಡಿಸಿದೆ. ಸಿಎಂ ಪತ್ನಿ ಪಾರ್ವತಿ ಸಲ್ಲಿಸಿದ್ದ, ‘ಇಂತಹದ್ದೇ ಜಾಗದಲ್ಲಿ ಪರ್ಯಾಯ ನಿವೇಶನ ಕೊಡಿ’ ಎಂಬ ಅರ್ಜಿ ಪ್ರಸ್ತಾಪ ಮಾಡಿಲ್ಲ. ಆದರೆ, ಈ ಪ್ರಕರಣದಲ್ಲಿ ಅಧಿಕಾರಿಗಳ ಲೋಪದ ಬಗ್ಗೆ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.
https://www.newsics.com/2025/07/31/dharmasthala-case-vigilance-tight-security-at-grave-digging-site/