newsics.com
ಬೆಂಗಳೂರು: ಬಾಲಕನನ್ನು ಅಪಹರಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿಶ್ಚಿತ್ ಹತ್ಯೆಗೀಡಾದ ಬಾಲಕ. ಈತನ ಪೋಷಕರು ನೀಡಿದ ದೂರಿನ ಮೇರೆಗೆ ಅಪಹರಣ ಹಾಗೂ ಕೊಲೆ ಪ್ರಕರಣ ದಾಖಲಿಸಿಕೊಂಡು ಹಂತಕರಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅರಕೆರೆಯ ಶಾಂತಿನಿಕೇತನ ಲೇಔಟ್ ನಲ್ಲಿ ನಿಶ್ಚಿತ್ನ ಪೋಷಕರು ವಾಸವಾಗಿದ್ದಾರೆ. ಬಾಲಕನ ತಂದೆ ಪ್ರತಿಷ್ಠಿತ ಕಾಲೇಜೊಂದರಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.
ಬುಧವಾರ ಸಂಜೆ ಟ್ಯೂಷನ್ ಮುಗಿಸಿ ಅರಕೆರೆ ಬಳಿ ಸೈಕಲ್ನಲ್ಲಿ ನಿಶ್ಚಿತ್ ಮನೆಗೆ ಬರುತ್ತಿದ್ದಾಗ ಬೈಕ್ನಲ್ಲಿ ಬಂದು ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟ್ಯೂಷನ್ ಮುಗಿದು ತುಂಬಾ ಹೊತ್ತಾದರೂ ಮನೆಗೆ ಬಾರದ ಮಗನ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದರು. ನಿರಂತರ ಶೋಧದ ಬಳಿಕ ಮಗನ ಬಗ್ಗೆ ಮಾಹಿತಿ ದೊರಕದ ಕಾರಣ ಹುಳಿಮಾವು ಪೊಲೀಸ್ ಠಾಣೆಗೆ ತೆರಳಿ ಮಿಸ್ಸಿಂಗ್ ಕಂಪ್ಲೇಂಟ್ ನೀಡಿದ್ದರು. ಅಷ್ಟೊತ್ತಿಗಾಗಲೇಅಷ್ಟ ಹೊತ್ತಿಗಾಗಲೇ ಅಪಹರಣಕಾರರು ಕರೆ ಮಾಡಿ ಮಗನನ್ನ ಜೀವಂತವಾಗಿ ನೋಡಬೇಕಾದರೆ 5 ಲಕ್ಷ ರೂಪಾಯಿ ನೀಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡುವುದಾಗಿ ಪೋಷಕರು ಒಪ್ಪಿಕೊಂಡಿದ್ದರು. ಈ ವಿಷಯ ತಿಳಿದ ಪೊಲೀಸರು ಅಪಹರಣಕಾರರ ಫೋನ್ ಕರೆ ಆಧರಿಸಿ ಲೊಕೇಷನ್ ಟ್ರೇಸ್ ಮಾಡಿ ಶೋಧಕಾರ್ಯ ಚುರುಕುಗೊಳಿಸಿದ್ದರು.
ಠಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಬಾಲಕನನ್ನು ಹತ್ಯೆ ಮಾಡಿದ ಕಿರಾತಕರು ಶವ ಬಿಸಾಕಿ ಆರೋಪಿಗಳು ಪರಾರಿಯಾಗಿದ್ದಾರೆ.
ಬಾಲಕನ ಕತ್ತು ಕುಯ್ದು, ಮುಖಚಹರೆ ಗೊತ್ತಾಗದಿರಲಿ ಎಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಡಿಸಿಪಿ ನಾರಾಯಣ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಸಿ.ಕೆ. ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದ್ಯ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Protest against Pratham ನಟ ಪ್ರಥಮ್ ಮುಖಕ್ಕೆ ಮಸಿ ಬಳಿದು ಆಕ್ರೋಶ, ಠಾಣೆ ಬಳಿ ಉದ್ವಿಗ್ನ ಸ್ಥಿತಿ