newsics.com
ನಟಿ ಭಾವನಾ ರಾಮಣ್ಣ ಅಮ್ಮನಾಗುತ್ತಿರುವ ಸಂತಸದಲ್ಲಿದ್ದಾರೆ. ಅವರು ಏಳು ತಿಂಗಳ ಗರ್ಭಿಣಿಯಾಗಿದ್ದು ಸೀಮಂತ ಶಾಸ್ತ್ರ ಅದ್ದೂರಿಯಾಗಿ ನಡೆದಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಭರತನಾಟ್ಯ ಕಲಾವಿದೆ ಭಾವನಾ ರಾಮಣ್ಣ, ತಮ್ಮ 40ನೇ ವಯಸ್ಸಿನಲ್ಲಿ ಒಂಟಿಯಾಗಿ ತಾಯಿಯಾಗುವ ತೀರ್ಮಾನವನ್ನು ಕೈಗೊಂಡಿದ್ದಾರೆ. ಐವಿಎಫ್ ಮೂಲಕ ಆರು ತಿಂಗಳ ಗರ್ಭಿಣಿಯಾಗಿರುವ ಭಾವನಾ, ಈ ವರ್ಷದ ಕೊನೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.
ಸರಳವಾಗಿ ನಡೆದರೂ ಸಂಪ್ರದಾಯದ ಪ್ರಕಾರ ಸೀಮಂತ ನಡೆದಿದೆ.ಸೀಮಂತಕ್ಕೆ ಭಾವನಾ ಹಸಿರು ಬಣ್ಣದ ಸೀರೆ ಧರಿಸಿದ್ದರು. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಕೆಲವೇ ಆಪ್ತರು, ಕುಟುಂಬಸ್ಥರು ಹಾಗೂ ಸ್ನೇಹಿತೆಯರನ್ನು ಮಾತ್ರ ಆಹ್ವಾನಿಸಿದ್ದರು. ಮತ್ತೈದೆಯರು ಭಾವನಾಗೆ ಮಡಿಲು ತುಂಬುವ ಶಾಸ್ತ್ರ ಮಾಡಿ ಸಿಹಿ ತಿನ್ನಿಸಿದ್ದಾರೆ. ಹಳದಿ ಮಿಶ್ರಿತ ಹೂವಿಂದ ಅಲಂಕೃತ ಜಾಗದ ಮುಂದೆ ಭಾವನಾ ಕುಳಿತು ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದಾರೆ.
https://www.newsics.com/2025/08/01/57773dharmasthala-case-handkerchief-found-at-7th-point/