Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Prajwal Revanna : ಜೀವಾವಧಿ ಶಿಕ್ಷೆ ಶಾಕ್​ನಲ್ಲಿ ಮಾಜಿ ಸಂಸದ! ರಾತ್ರಿಯೆಲ್ಲಾ ನಿದ್ದೆ ಮಾಡದೆ ಕುಳಿತ ಪ್ರಜ್ವಲ್
ಕರ್ನಾಟಕಪ್ರಮುಖ

Prajwal Revanna : ಜೀವಾವಧಿ ಶಿಕ್ಷೆ ಶಾಕ್​ನಲ್ಲಿ ಮಾಜಿ ಸಂಸದ! ರಾತ್ರಿಯೆಲ್ಲಾ ನಿದ್ದೆ ಮಾಡದೆ ಕುಳಿತ ಪ್ರಜ್ವಲ್

Share
2 Min Read
SHARE

newsics.com

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ  ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ದೋಷಿ ಎಂದು ಪರಿಗಣಿಸಿ ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

 

ಆಗಸ್ಟ್​ 2ರಿಂದಲೇ ಅಪರಾಧಿಯಾಗಿ ಪ್ರಜ್ವಲ್ ರೇವಣ್ಣ ಸೆರೆವಾಸ ಶುರುವಾಗಿದೆ. ಮಾಡಿದ ತಪ್ಪಿಗೆ ಪ್ರಜ್ವಲ್ ರೇವಣ್ಣ ಜೀವನ ಪರ್ಯಂತ ಜೈಲುವಾಸ ಅನುಭವಿಸುವಂತಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಮಹತ್ವದ ತೀರ್ಪು ನೀಡಿದ್ರು.

ಶಿಕ್ಷೆಯ ಪ್ರಮಾಣ ಕೇಳಿ ಗಳಗಳನೆ ಅತ್ತ ಪ್ರಜ್ವಲ್​ ರೇವಣ್ಣಗೆ ಜೈಲಿನಲ್ಲೂ ನಿದ್ದೆ ಬರ್ತಿಲ್ಲ. ಪರಪ್ಪನ ಅಗ್ರಹಾರ ಜೈಲಿನಲ್ಲೇ ಪ್ರಜ್ವಲ್ ರೇವಣ್ಣ ಬದುಕಿರುವವರೆಗೂ ಜೀವನ ಕಳೆಯಬೇಕಿದೆ. ನಿನ್ನೆ ಶಿಕ್ಷೆ ಪ್ರಮಾಣ ಘೋಷಣೆಯಾದ ಬಳಿಕ ನೊಂದಿರುವ ಪ್ರಜ್ವಲ್​ ರೇವಣ್ಣ ರಾತ್ರಿಯೆಲ್ಲಾ ನಿದ್ದೆ ಮಾಡಿಲ್ಲ ಎನ್ನಲಾಗ್ತಿದೆ.

ಜೀವನಪರ್ಯಂತ ಜೈಲಿನಲ್ಲೇ ಕಾಲಕಳೆಯಬೇಕಾ ಪ್ರಜ್ವಲ್​ಗೆ ಭವಿಷ್ಯದ ದಿನಗಳ ಬಗ್ಗೆಯೇ ಚಿಂತೆಯಾಗಿದೆಯಂತೆ. ತಡರಾತ್ರಿವರೆಗೆ ಜೈಲಿನ ಪುರುಷ ಬ್ಯಾರಕ್ ಕೊಠಡಿಯಲ್ಲಿ ಪ್ರಜ್ವಲ್​ ಒಬ್ಬಂಟಿಯಾಗಿ ಕುಳಿತಿದ್ದ. ಚಿಂತೆಗೆ ಜಾರಿದ್ದ ಪ್ರಜ್ವಲ್ ರಾತ್ರಿ ಊಟ ಕೂಡ ಮಾಡಿಲ್ಲ  ಎನ್ನಲಾಗ್ತಿದೆ.

 

ಏನಿದು ಪ್ರಕರಣ?‌

ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ನಂತರ ವಿಷಯ ಹೊರಗೆ ಬರುತ್ತೆ ಎಂದು ತಿಳಿದು ಸಂತ್ರಸ್ತೆಯನ್ನ ರೇವಣ್ಣ, ಭವಾನಿ, ಸತೀಶ್ ಬಾಬು ಸೇರಿದಂತೆ 9 ಜನ ಸೇರಿ ಅಪಹರಿಸಿದ್ದರು. ಬಳಿಕ ಆಕೆಯನ್ನು ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು. ಇದೇ ಅಪಹರಣ ಪ್ರಕರಣದಿಂದಲೇ ರೇವಣ್ಣ ಸೇರಿದಂತೆ 8 ಜನ ಜೈಲಿಗೆ ಹೋಗಿದ್ದರು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು.

 

ಆನಂತರ ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ, ಆಕೆಯ ಹೇಳಿಕೆ ದಾಖಲು ಮಾಡಿ ಪ್ರಕರಣ ದಾಖಲಿಸಿತ್ತು. ಹೇಳಿಕೆಯ ಮೇಲೆ ತನಿಖೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಸಂತ್ರಸ್ತೆಯನ್ನು ಬೆತ್ತಲುಗೊಳಿಸಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋವೊಂದು ಪತ್ತೆಯಾಗಿತ್ತು. ಇದು ಪ್ರಕರಣದ ಬಹುದೊಡ್ಡ ಸಾಕ್ಷ್ಯವಾಗಿ ಪರಿಣಮಿಸಿತು. ಕೊನೆಗೆ ಎಫ್‌ಎಸ್‌ಎಲ್‌ ಮೂಲಕ ವಿಡಿಯೋ ತುಣುಕಿನಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದು ಸಾಬೀತಾಗಿತ್ತು.

https://www.newsics.com/2025/08/03/the-man-who-married-four-women-from-the-same-school/

 

TAGGED:#PrajwalRevanna #guilty #rapecase #court #verdict
Share This Article
Facebook Twitter Copy Link Print
Previous Article ಒಂದೇ ಶಾಲೆಯ ನಾಲ್ವರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ
Next Article Tamil comedian Madhan Bob is no more ತಮಿಳಿನ ಜನಪ್ರಿಯ ಹಾಸ್ಯನಟ ಮಧನ್ ಬಾಬ್ ಇನ್ನಿಲ್ಲ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?