newsics.com
ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೆ ಮುಂದಿನ ಮೂರು ದಿನಗಳ ಬಳಿಕ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯ ರಾಜಧಾನಿ ಬೆಂಗಳುರಿನಲ್ಲಿ ಆಗಸ್ಟ್ 6ರಬಳಿಕ ಭಾರಿ ಮಳೆಯಾಗಲಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಯಾದಗಿರಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
https://www.newsics.com/2025/08/03/house-accidentally-set-on-fire-by-gods-lamp/