newsics.com
ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದಲ್ಲಿರುವ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದಿದೆ. ವಾರ್ಧಾ ರಸ್ತೆಯಲ್ಲಿರುವ ಗಡ್ಕರಿ ಅವರ ಮನೆಯನ್ನು ಸ್ಫೋಟಿಸಲಾಗುವುದು ಎಂದು ಕರೆ ಮಾಡಿದ ವ್ಯಕ್ತಿಯೊಬ್ಬರು ಎಚ್ಚರಿಕೆ ನೀಡಿದ್ದಾನೆ.
ಈ ಬಗ್ಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಭಾನುವಾರ ಬೆಳಿಗ್ಗೆ 8:46 ಕ್ಕೆ ಬೆದರಿಕೆ ಕರೆ ಬಂದಿದ್ದು, ಪೊಲೀಸರು ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಈ ಮಾಹಿತಿಯನ್ನು ಪ್ರತಾಪ್ ನಗರ ಪೊಲೀಸರಿಗೆ ರವಾನಿಸಲಾಗಿದ್ದು, ಅವರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ಮುಂದಾಗಿದ್ದು, ಸಚಿವರ ನಿವಾಸದ ಭದ್ರತೆ ಹೆಚ್ಚಿಸಲಾಗಿದೆ.
https://www.newsics.com/2025/08/03/bomb-threat-to-union-minister-nitin-gadkaris-residence/