newsics.com
ಹೊಸದಿಲ್ಲಿ: ಚೀನಾದಿಂದ ಭಾರತದ ಭೂ ಕಬಳಿಕೆ ಹೇಳಿಕೆ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಚೀನಿಯರು ವಶಪಡಿಸಿಕೊಂಡಿದ್ದಾರೆ ಎಂದು ನಿಮಗೆ ಹೇಗೆ ತಿಳಿಯಿತು? ಎಂದು ಪ್ರಶ್ನೆ ಮಾಡಿರುವ ಕೋರ್ಟ್, ನೀವು ನಿಜವಾದ ಭಾರತೀಯರಾಗಿದ್ದರೆ ಇದನ್ನು ಹೇಳುವುದಿಲ್ಲ ಎಂದು ಕಿಡಿಕಾರಿದೆ.
ಭಾರತೀಯ ಸೇನೆಯ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ.
2000 ಕಿ.ಮೀ. ಭಾರತದ ಭೂಮಿಯನ್ನು ಚೀನಿಯರು ವಶಪಡಿಸಿಕೊಂಡಿದ್ದಾರೆ ಎಂದು ನಿಮಗೆ ಹೇಗೆ ತಿಳಿಯಿತು? ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಇದನ್ನೆಲ್ಲಾ ಹೇಳುವುದಿಲ್ಲ ಎಂದು ನ್ಯಾಯಮೂರ್ತಿ ದತ್ತ ಅವರು ಹೇಳಿದ್ದಾರೆ.
ಗಂಡನ ಸ್ನೇಹಿತನೇ ಬೇಕೆಂದು ಹೆಂಡತಿ ಪಟ್ಟು; ಮನನೊಂದು ಮನೆಯವರೆಲ್ಲರೂ ಆತ್ಮಹತ್ಯೆ