Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ: ಒಂದು ತಲೆಬುರುಡೆ, ಬೆನ್ನು ಮೂಳೆ ಸೇರಿ ಸುಮಾರು 100 ಮೂಳೆ ಪತ್ತೆ
ಕರ್ನಾಟಕಪ್ರಮುಖ

ಧರ್ಮಸ್ಥಳ: ಒಂದು ತಲೆಬುರುಡೆ, ಬೆನ್ನು ಮೂಳೆ ಸೇರಿ ಸುಮಾರು 100 ಮೂಳೆ ಪತ್ತೆ

Share
1 Min Read
SHARE

newsics.com

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಆರೋಪ ಪ್ರಕರಣದ ಸಂಬಂಧ ಎಸ್‌ಐಟಿ ಶೋಧಕಾರ್ಯ ಮುಂದುವರಿಸಿದ್ದು, ಸೋಮವಾರ ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಮೃತದೇಹದ ಅವಶೇಷಗಳು ಪತ್ತೆಯಾಗಿವೆ.

ಪ್ರಕರಣದ ಸಾಕ್ಷಿ ದೂರುದಾರ ತೋರಿಸಿದ್ದ 11ನೇ ಜಾಗಕ್ಕಿಂತ ಸುಮಾರು 100 ಮೀಟರ್ ದೂರದಲ್ಲಿ ನೆಲದ ಮೇಲೆ ಅವಶೇಷಗಳು ಸಿಕ್ಕಿವೆ.‌ ಆ ಜಾಗವನ್ನೂ ಆತನೇ ತೋರಿಸಿದ್ದ.
ಒಂದು ತಲೆಬುರುಡೆ, ಬೆನ್ನು ಮೂಳೆ ಸೇರಿ ಸುಮಾರು 100 ಮೂಳೆ ಸಿಕ್ಕಿವೆ’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

‘ಉದ್ದನೆಯ ಬೆನ್ನುಮೂಳೆಯೂ ಸ್ಥಳದಲ್ಲಿತ್ತು. ತಜ್ಞರ ತಂಡವು ಅದನ್ನು ವೈಜ್ಞಾನಿಕವಾಗಿ ಸಂಗ್ರಹ ಮಾಡಿದೆ. ಈ ಸ್ಥಳದಲ್ಲೇ ಗಂಟು ಹಾಕಿರುವ ಸೀರೆ ಸಹ ಸಿಕ್ಕಿದೆ’ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

ಎಸ್‌ಐಟಿಯವರು ಬೆಳಿಗ್ಗೆ 11.30 ಗಂಟೆ ಸುಮಾರಿಗೆ ಕಾಡು ಪ್ರವೇಶಿಸಿದ್ದರು. ಇಷ್ಟುದಿನ ಮಧ್ಯಾಹ್ನ 2 ಗಂಟೆ ಸುಮಾರಿಗೆ ಊಟದ ವಿರಾಮ ನೀಡಲಾಗುತ್ತಿತ್ತು. ಸೋಮವಾರ ಊಟದ ವಿರಾಮ‌ವಿಲ್ಲದೆ ಶೋಧ ಮುಂದುವರಿಯಿತು. ಎಸ್‌ಐಟಿಯವರು ಕಾಡಿನಿಂದ ಹೊರಗೆ ಬರುವಾಗ ಸಂಜೆ 6.15 ದಾಟಿತ್ತು.

ಸಾಕ್ಷಿ ದೂರುದಾರ ಧರ್ಮಸ್ಥಳದ ಸ್ನಾನಘಟ್ಟದ ಆಸುಪಾಸಿನಲ್ಲಿ 13 ಜಾಗ ತೋರಿಸಿ, ಅಲ್ಲಿ ಶವಗಳನ್ನು ಹೂತಿದ್ದಾಗಿ ತಿಳಿಸಿದ್ದ‌. ಆತ ತೋರಿಸಿದ್ದ 10 ಜಾಗಗಳನ್ನು ಇಷ್ಟು ದಿನ ಸರದಿಯಂತೆ ಅಗೆಯಲಾಗಿತ್ತು.‌ ಅದರ ಅನ್ವಯ ದೂರುದಾರ ತೋರಿಸಿರುವ 11ನೇ ಜಾಗವನ್ನು ಸೋಮವಾರ ‌ಅಗೆಯಬೇಕಿತ್ತು.

ಅಧಿಕಾರಿಗಳ ತಂಡ ಕಾಡಿನೊಳಗೆ ಪ್ರವೇಶಿಸಿದ ಸ್ವಲ್ಪ ಹೊತ್ತಿನಲ್ಲೆ ಎರಡು ಚೀಲ ಉಪ್ಪು ಒಯ್ದಲಾಯಿತು. ಕಮಾಂಡೊ ಪಡೆಯ ನಾಲ್ವರು ಭದ್ರತಾ ಸಿಬ್ಬಂದಿಯನ್ನು ಎಸ್‌ಐಟಿ ಅಧಿಕಾರಿಗಳು ಮೃತದೇಹದ ಅವಶೇಷ ಪತ್ತೆಯಾದ ಸ್ಥಳಕ್ಕೆ ಕರೆಸಿಕೊಂಡರು.

ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್‌, ಎಸ್‌ಐಟಿಯ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಸ್ಥಳದಲ್ಲಿದ್ದರು. ಆರನೇ ಜಾಗದಲ್ಲಿ ಗಂಡಸಿನ ಮೃತದೇಹದ ಅವಶೇಷ ಗುರುವಾರ ಪತ್ತೆಯಾಗಿತ್ತು. ಉಳಿದ ಒಂಬತ್ತು ಜಾಗಗಳಲ್ಲಿ ಮೃತದೇಹಗಳನ್ನು ಹೂತ ಯಾವುದೇ ಕುರುಹು ಸಿಕ್ಕಿರಲಿಲ್ಲ.

Transport workers’ strike ಸಾರಿಗೆ ನೌಕರರ ಮುಷ್ಕರ: ನಿಂತಲ್ಲೇ ನಿಂತ ಬಸ್‌ಗಳು,‌ ಶಾಲೆಗಳಿಗಿಲ್ಲ ರಜೆ, ಹೆಚ್ಚಿದ ಪರದಾಟ

TAGGED:Dharmasthala: About 100 bonesdiscoveredincluding a skull and spine
Share This Article
Facebook Twitter Copy Link Print
Previous Article Transport workers’ strike ಸಾರಿಗೆ ನೌಕರರ ಮುಷ್ಕರ: ನಿಂತಲ್ಲೇ ನಿಂತ ಬಸ್‌ಗಳು,‌ ಶಾಲೆಗಳಿಗಿಲ್ಲ ರಜೆ, ಹೆಚ್ಚಿದ ಪರದಾಟ
Next Article ಒಂದೇ ಹಳ್ಳಿಯಲ್ಲಿ 47 ‘IAS, IPS ಅಧಿಕಾರಿಗಳು!; ‌ಇದು ಭಾರತದ UPSC ವಿಲೇಜ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?