newsics.com
ಉತ್ತರಾಖಂಡ್: ಉತ್ತರಕಾಶಿಯ ಹರ್ಸಿಲ್ ಬಳಿಯ ಧರಾಲಿ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಭಾರಿ ಮೇಘಸ್ಫೋಟದಲ್ಲಿ ಹಲವು ಮನೆಗಳು ಕೊಚ್ಚಿಹೋಗಿದ್ದು, ಮೂಲಗಳ ಪ್ರಕಾರ 60 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಉತ್ತರಾಖಂಡದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯು ಅಪಾರ ಹಾನಿಯನ್ನುಂಟುಮಾಡುತ್ತಿದ್ದು, ನದಿಗಳಲ್ಲಿ ಪ್ರವಾಹಗಳು ಹರಿಯುತ್ತಿವೆ.
ತುರ್ತು ಸೇವಾ ಅಧಿಕಾರಿಗಳು ಮತ್ತು ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಉತ್ತರಾಖಂಡ ಪೊಲೀಸರು ತಿಳಿಸಿದ್ದಾರೆ. ಸಾವು ನೋವಿನ ಬಗ್ಗೆ ಸದ್ಯಕ್ಕೆ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.