newsics.com
ಡೆಹ್ರಾಡೂನ್: ಖೀರ್ ಗಂಗಾ ನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಮಂಗಳವಾರ ಮೇಘಸ್ಫೋಟದಿಂದ ಉಂಟಾದ ವಿನಾಶಕಾರಿ ಹಠಾತ್ ಪ್ರವಾಹದಿಂದಾಗಿ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ಸಂಪೂರ್ಣ ನಿರ್ನಾಮವಾಗಿದೆ. ಹೋಟೆಲ್‌ಗಳು ಮತ್ತು ಹೋಂಸ್ಟೇಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಮೃತಪಟ್ಟರೇ 8-10 ಸೈನಿಕರು ಸೇರಿ ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಭೂಕುಸಿತದ ನಡುವೆ ಭಾರೀ ಮಳೆ ಮುಂದುವರಿದ ಕಾರಣ ಭಾರತೀಯ ಹವಾಮಾನ ಇಲಾಖೆ ಇಂದು ಹರಿದ್ವಾರ, ನೈನಿತಾಲ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ರಾಜ್ಯದ ಇತರ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ ಉತ್ತರಾಖಂಡ ಸರ್ಕಾರವು ಡೆಹ್ರಾಡೂನ್, ನೈನಿತಾಲ್, ತೆಹ್ರಿ, ಚಮೋಲಿ, ರುದ್ರಪ್ರಯಾಗ, ಚಂಪಾವತ್, ಪೌರಿ, ಅಲ್ಮೋರಾ ಮತ್ತು ಬಾಗೇಶ್ವರ್ ಒಂಬತ್ತು ಜಿಲ್ಲೆಗಳಲ್ಲಿ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿದೆ.