newsics.com
ಉತ್ತರಾಖಂಡದಲ್ಲಿ ಭಾರಿ ಮಳೆಯಿಂದ ಕೇದಾರನಾಥ ಯಾತ್ರೆ ಸ್ಥಗಿತಗೊಳಿಸಲಾಗಿದೆ. ಭಾರೀ ಮೇಘಸ್ಫೋಟದಿಂದಾಗಿ ವಿನಾಶವನ್ನು ಉಂಟುಮಾಡಿದೆ. ಸದ್ಯ ಹಠಾತ್ ಮೇಘಸ್ಫೋಟಕ್ಕೆ ಉತ್ತರಕಾಶಿ ಅಕ್ಷರಶಃ ನಲುಗಿ ಹೋಗಿದೆ. ನೋಡನೋಡುತ್ತಿದ್ದಂತೆ ಪೃಕೃತಿಯ ದೌದ್ರಾವತಾರಕ್ಕೆ ಉತ್ತರಕಾಶಿಯ ಧರಾಲಿ ಗ್ರಾಮವೇ ಕೊಚ್ಚಿಕೊಂಡು ಹೋಗಿಬಿಟ್ಟಿದೆ.
ಪೊಲೀಸ್, ಸೇನೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್‌ನ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕೇದಾರನಾಥ ಯಾತ್ರೆ ಸ್ಥಗಿತಗೊಳಿಸಲಾಗಿದೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಮ್ಮ ಆಂಧ್ರಪ್ರದೇಶ ಭೇಟಿಯನ್ನು ಮೊಟಕುಗೊಳಿಸಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಲು ಡೆಹ್ರಾಡೂನ್‌ಗೆ ಮರಳಿದರು. ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ 130 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಮತ್ತು ತಕ್ಷಣದ ಆಹಾರ, ಆಶ್ರಯ ಮತ್ತು ವೈದ್ಯಕೀಯ ಸಹಾಯಕ್ಕಾಗಿ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು.