Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tirumala AI Darshan: ತಿರುಮಲ ದರ್ಶನಕ್ಕೆ ಎಐ ಬಳಕೆ: ಏನಿದು ವಿವಾದ?
ದೇಶಪ್ರಮುಖ

Tirumala AI Darshan: ತಿರುಮಲ ದರ್ಶನಕ್ಕೆ ಎಐ ಬಳಕೆ: ಏನಿದು ವಿವಾದ?

Share
2 Min Read
SHARE

newsics.com

ಕಲಿಗಾಲದಲ್ಲಿ ಈಗೇನಿದ್ರೂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ನದ್ದೇ (AI) ಹವಾ. ಈ ಅತ್ಯಾಧುನಿಕ ಕೃತಕ ಬುದ್ಧಿಮತ್ತೆಯ ಚಾಕಚಕ್ಯತೆ ಇದೀಗ ತಿಮ್ಮಪ್ಪನ ಭಕ್ತರ ನೆರವಿಗೂ ಬರಲಿದೆ. ತಿರುಪತಿ ತಿಮ್ಮಪ್ಪನ ದೇವಾಲಯ ಇಡೀ ವಿಶ್ವದಲ್ಲೇ AI ಅಳವಡಿಸಿಕೊಳ್ಳುವ ಮೊಟ್ಟ ಮೊದಲ ದೇವಾಲಯ ಅನ್ನೋ ಖ್ಯಾತಿಗೆ ಪಾತ್ರವಾಗುತ್ತಿದೆ.

ಹೌದು,  ತಿರುಮಲ ತಿಮ್ಮಪ್ಪನ  ದರ್ಶನಕ್ಕಾಗಿ ಕಾಯುವ ಸಮಯವನ್ನು ಕಡಿಮೆ ಮಾಡಲು ಗೂಗಲ್ ಮತ್ತು ಟಿಸಿಎಸ್‌ನಂತಹ ಪ್ರಮುಖ ತಂತ್ರಜ್ಞಾನ ಸಂಸ್ಥೆಗಳ ಸಹಯೋಗದೊಂದಿಗೆ ಸುಧಾರಿತ AI ತಂತ್ರಜ್ಞಾನವನ್ನು ಬಳಸುವ ಯೋಜನೆಯನ್ನು ಟಿಟಿಡಿ ಘೋಷಿಸಿತ್ತು.

 

ತಿರುಮಲದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು ಸರತಿ ಸಾಲುಗಳು ಮತ್ತು ವೈಕುಂಠ ಸಂಕೀರ್ಣಗಳಲ್ಲಿ ದೀರ್ಘ ಸಮಯ ಕಾಯುತ್ತಿರುವ ಸಾಮಾನ್ಯ ಭಕ್ತರ ವಿಶಾಲ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು, ಗೂಗಲ್, ಟಿಸಿಎಸ್ ಮತ್ತು ಇತರ ಸಂಸ್ಥೆಗಳ ಸಹಯೋಗದೊಂದಿಗೆ ಸುಧಾರಿತ ಎಐ ತಂತ್ರಜ್ಞಾನವನ್ನು ಬಳಸಿಕೊಂಡು ನಿಗದಿತ ಸಮಯದೊಳಗೆ ಭಕ್ತರಿಗೆ ದರ್ಶನ ನೀಡಲು ಟಿಟಿಡಿ ಮಂಡಳಿ ನಿರ್ಧರಿಸಿದೆ” ಎಂದು ಟಿಟಿಡಿ ಅಧ್ಯಕ್ಷ ಬಿಆರ್ ನಾಯು ಮಂಡಳಿಯ ಸಭೆಯಲ್ಲಿ ಹೇಳಿದ್ದರು

ಆದರೆ ಎಐ ತಂತ್ರಜ್ಞಾನ ಬಳಕೆಗೆ ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಶ್ರೀ ಸುಬ್ರಮಣ್ಯಂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯನ್ನು ಕೈಬಿಡುವಂತೆ ಒತ್ತಾಐ ಮಾಡಿದ್ದರು. ಆದರೆ ಟಿಟಿಡಿ ಮಂಡಳಿ ಇದಕ್ಕೆ ಸ್ಪಷ್ಟನೆ ನೀಡಿದ್ದು, ಭಕ್ತರು ದರ್ಶನಕ್ಕಾಗಿ ಕಾಯುವ ಸಮಯವನ್ನು ಕಡಿಮೆ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದೆ. ಈ ಹಿಂದೆಯೂ ಇಂತಹದ್ದೇ ಕಾರ್ಯಕ್ರಮ ರೂಪಿಸಲು ಟಿಟಿಡಿ ಮುಂದಾಗಿತ್ತು, ಆದರೆ ಟಿಟಿಡಿ ಕಮಿಟಿಯಲ್ಲಿ ಒಗ್ಗಟ್ಟು ಮೂಡದ ಕಾರಣ ಯೋಜನೆಯನ್ನು ಕೈಬಿಡಲಾಗಿತ್ತು.

ಈ ಯೋಜನೆಯ ಅಡಿ ಗರ್ಭಗುಡಿಯಲ್ಲಿ ಚಲಿಸುವ ಕಾರ್ಪೆಟ್ ಅಳವಡಿಸುವ ಯೋಜನೆ ಮಾಡಲಾಗಿತ್ತು. ಆದರೆ ಶಾಸ್ತ್ರಗಳ ಕಾರಣದಿಂದ ಯೋಜನೆಯನ್ನು ಕೈ ಬಿಡಲಾಗಿತ್ತು. ಆದರೆ ಈಗ ನೌಕರರ ವರ್ಗ ಟಿಟಿಡಿ ಪ್ರಸ್ತಾವನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಎಐ ತಂತ್ರಜ್ಞಾನ ಬಳಕೆಯಿಂದ ಸುದೀರ್ಘ ಕಾಯುವಿಕೆಗೆ ಬ್ರೇಕ್ ಹಾಕಲಿದೆ. ಜೊತೆಗೆ ಯಾತ್ರಾರ್ಥಿಗಳಿಗೆ ತಮ್ಮ ದರ್ಶನ ಸಮಯದ ಬಗ್ಗೆ ಮುಂಚಿತವಾಗಿ ಮಾಹಿತಿಯನ್ನು ಒದಗಿಸಬಹುದು. ಇದರಿಂದ ಭಕ್ತರು ದೇವಾಲಯಕ್ಕೆ ಭೇಟಿ ನೀಡುವ ಸಮಯವನ್ನು ಖಚಿತಪಡಿಸಿಕೊಂಡು ಕ್ಷೇತ್ರಕ್ಕೆ ಆಗಮಿಸುವ ಅಥವಾ ಅದರಂತೆ ತಮ್ಮ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳುವ ಅವಕಾಶವನ್ನು ಸೃಷ್ಟಿಸಬಹುದು ಎಂದು ತಿಳಿಸಿದ್ದಾರೆ.

https://www.newsics.com/2025/08/06/explosion-at-oxygen-plant-two-dead-many-injured/

TAGGED:#AI #Tirumala #Darshan #controversy #temple
Share This Article
Facebook Twitter Copy Link Print
Previous Article ಆಮ್ಲಜನಕ ಸ್ಥಾವರದಲ್ಲಿ ಸ್ಫೋಟ : ಇಬ್ಬರು ಸಾವು, ಹಲವರಿಗೆ ಗಾಯ
Next Article Smart Meter Scam: ಸ್ಮಾರ್ಟ್ ಮೀಟರ್ ಅಕ್ರಮ ಆರೋಪ – ಸಚಿವ ಕೆ.ಜೆ ಜಾರ್ಜ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್.!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?