newsics.com
ನಿಮಗಿಲ್ಲದ ಸಂಯಮದ ಪಾಠ ಬಡಪಾಯಿ ದುಡಿದು ತಿನ್ನುವ ಕೆಎಸ್‌ಆರ್‌ಟಿಸಿ ನೌಕರರಿಗೇಕೆ ಸಂಯಮದ ಪಾಠ.ನೀವು ಯಾವ ಖರ್ಚು ಉಳಿಸಿದ್ದೀರಿ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮನೆಯಲ್ಲಿ ಒಂದು ದಿನದ ಕಾಫಿ, ಟೀ ಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ವಾಗ್ದಾಳಿ ಮಾಡಿದ್ದಾರೆ.
ಸಿಎಂ ಅವರ ಮನೆಗೆ ಒಂದು ದಿನದ ಕಾಫಿ, ಟೀಗೆ 11 ಲಕ್ಷ ಖರ್ಚು ಮಾಡಿದ್ದಾರೆ. ಅದೇನು ವಿಶೇಷ ಕಾಫಿಯೇ? ನಿಮ್ಮ ಮೂತಿ ನೋಡಿ ಜನರು ಬರುವುದಿಲ್ಲ. ಕಾಸು ಕೊಟ್ಟರಷ್ಟೇ ಬರುತ್ತಾರೆಂದು 300- 400 ರೂ. ಕೊಟ್ಟು ಒಂದೊಂದು ಸಮಾವೇಶಕ್ಕೆ ಕೋಟಿ ಕೋಟಿ ದುಡ್ಡು ಖರ್ಚು ಮಾಡಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಸಿ ಟಿ ರವಿ ಅವರು ಪ್ರಶ್ನಿಸಿದರು.
ಆಳುವ ಪಕ್ಷ ಕಾಂಗ್ರೆಸ್, ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಅಧಿಕಾರದಲ್ಲಿ ಇಲ್ಲದೆ ಇದ್ದಾಗ ಒತ್ತಡ ತಂತ್ರ, ಈಗ ನಿರ್ಲಕ್ಷ್ಯದ ಮನಸ್ಥಿತಿ- ಈ ಕಾರಣದಿಂದ ಸಾರಿಗೆ ಸಂಸ್ಥೆ ನೌಕರರು ಮುಷ್ಕರಕ್ಕೆ ಇಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಡಿಸಿದ್ದಾರೆ.
https://www.newsics.com/2025/08/06/is-this-what-a-groom-does-when-asked-to-dance/