newsics.com
ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಯುಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಲಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ ಎನ್ನಲಾಗಿದೆ.
ಅಸ್ಥಿಪಂಜರ ಶೋಧದ ನಡುವೆ ಧರ್ಮಸ್ಥಳ ಉದ್ವಿಗ್ನವಾಗಿದೆ. ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಲಾಗಿದೆ. ಅವರ ಕ್ಯಾಮರಾಗಳನ್ನು ಹಾಳು ಮಾಡಲಾಗಿದೆ. ನೇತ್ರಾವತಿಯ ಪಾಂಗಳ ಎಂಬಲ್ಲಿ ಹಲ್ಲೆ ನಡೆಸಲಾಗಿದ್ದು, ಉದ್ವಿಗ್ನ ಸ್ಥಿತಿ ಉಂಟಾಗಿದೆ. ಯುವಕರನ್ನು ಚದುರಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ
ಸ್ಥಳಕ್ಕೆ ಭಾರೀ ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
https://www.newsics.com/2025/08/06/trump-imposes-another-25-tariff-on-india/