newsics.com
ಬೆಂಗಳೂರು: ಮಂಗಳೂರಿನ ಕಂಕನವಾಡಿ ಬಳಿ 2022ರಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಜಾರಿ ನಿರ್ದೇಶನಾಲಯ ಎಂಟ್ರಿ ಕೊಟ್ಟಿದೆ. ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಸೈಯದ್ ಯಾಸೀನ್ನ ಬ್ಯಾಂಕ್ ಖಾತೆಯನ್ನು ಜಪ್ತಿ ಮಾಡಲಾಗಿದೆ.
ಆರೋಪಿ ಮಾಜ್ ಮುನೀರ್ ಕ್ರಿಪ್ಟೋ ಕರೆನ್ಸಿಯನ್ನ ಏಜೆಂಟ್ಸ್ಗಳ ಮೂಲಕ ಮಹಮ್ಮದ್ ಶಾರೀಕ್ಗೆ ಹಣ ತಲುಪಿಸಿದ್ದನು. ಪ್ರಕರಣ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ಅಲಿಯಾಸ್ ಪ್ರೇಮ್ ರಾಜ್ ಕೂಡ ಕ್ರಿಪ್ಟೊ ಕರೆನ್ಸಿ ಮೂಲಕವೇ ಇತರೆ ಆರೋಪಿಗಳಿಗೆ ಹಣ ವರ್ಗಾವಣೆ ಮಾಡುತ್ತಿದ್ದನು.
2022ರ ನವೆಂಬರ್19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋದಲ್ಲಿ ಐಇಡಿ ಕುಕ್ಕರ್ ಬಾಂಬ್ ಬಾಂಬ್ ಸ್ಫೋಟಗೊಂಡಿತ್ತು. ಘಟನೆ ಸಂಬಂಧ ಆಟೋ ಚಾಲಕ ಪುರುಷೋತ್ತಮನ ದೂರಿನನ್ವಯ ಮಂಗಳೂರಿನ ಕಂಕನಾಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ, ರಾಷ್ಟ್ರೀಯ ತನಿಖಾ ದಳ (NIA) ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ.