Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸ್ಫೋಟಕ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ;  ಮತಗಳ್ಳತನ ಆರೋಪಕ್ಕೆ ಚುನಾವಣಾಧಿಕಾರಿ ತಿರುಗೇಟು
ದೇಶಪ್ರಮುಖ

ಸ್ಫೋಟಕ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ;  ಮತಗಳ್ಳತನ ಆರೋಪಕ್ಕೆ ಚುನಾವಣಾಧಿಕಾರಿ ತಿರುಗೇಟು

Share
2 Min Read
SHARE

newsics.com

ನವದೆಹಲಿ: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಮತ್ತು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ” ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಗುರುವಾರ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಸ್ಫೋಟಕ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಹೊಸ ತಿರುವು ಪಡೆದುಕೊಂಡಿದೆ.

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಅನ್ಬು ಕುಮಾರ್ ಅವರು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆದು, ಮತದಾರರ ಪಟ್ಟಿಯಲ್ಲಿ ಅಕ್ರಮಗಳೆಂಬ ಆರೋಪಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಿತ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.
ಪತ್ತದಲ್ಲೇನಿದೆ?
ಅನ್ಬು ಕುಮಾರ್ ಅವರು ತಮ್ಮ ಪತ್ರದಲ್ಲಿ, ಮತದಾರರ ಪಟ್ಟಿಯ ತಯಾರಿಕೆಯು ಕಾಲಕಾಲಕ್ಕೆ ಸಂಪೂರ್ಣ ಪಾರದರ್ಶಕವಾಗಿ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. 2024ರ ನವೆಂಬರ್‌ನಲ್ಲಿ ಕರಡು ಮತದಾರರ ಪಟ್ಟಿಯನ್ನು ಮತ್ತು 2025ರ ಜನವರಿಯಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಕಾಂಗ್ರೆಸ್ ನಾಯಕರಿಗೆ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ. ಆದರೆ, ಈ ಪಟ್ಟಿಗಳ ಬಗ್ಗೆ ಕಾಂಗ್ರೆಸ್‌ನಿಂದ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗಿಲ್ಲ. ಎರಡನೇ ಹಂತದಲ್ಲಿ ಚುನಾವಣಾಧಿಕಾರಿಗಳ ಮುಂದೆಯೂ ಯಾವುದೇ ಆಕ್ಷೇಪಣೆಗಳನ್ನು ಎತ್ತಿಲ್ಲ. ಚುನಾವಣೆಯ ನಡವಳಿಕೆಯ ಬಗ್ಗೆ ಆಕ್ಷೇಪಣೆಗಳಿದ್ದರೆ, ಅವುಗಳನ್ನು ಎಲೆಕ್ಷನ್ ಪಿಟಿಷನ್ ಮೂಲಕ ಹೈಕೋರ್ಟ್‌ನಲ್ಲಿ ಸಲ್ಲಿಸಬೇಕಿತ್ತು. ಆದರೆ, ರಾಹುಲ್ ಗಾಂಧಿಯವರು ಕಾನೂನಾತ್ಮಕ ಕ್ರಮಕ್ಕಿಂತ ಸುದ್ದಿಗೋಷ್ಠಿಯ ಮೂಲಕ ಆರೋಪ ಮಾಡಿರುವುದು ಸರಿಯಲ್ಲ ಎಂದು ಅವರು ಟೀಕಿಸಿದ್ದಾರೆ.
ರಾಹುಲ್ ಗಾಂಧಿ ಅವರ ಆರೋಪಗಳನ್ನು ಸಾಬೀತುಪಡಿಸಲು, ಅನ್ಬು ಕುಮಾರ್ ಅವರು ರಿಜಿಸ್ಟ್ರೇಷನ್ ಆಫ್ ಎಲೆಕ್ಟೋರ್ಸ್ ರೂಲ್ಸ್ 1960ರ ಸೆಕ್ಷನ್ 20 (3)(b) ಪ್ರಕಾರ ಪ್ರಮಾಣ ಪತ್ರವನ್ನು ಸಹಿ ಮಾಡಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಈ ಪ್ರಮಾಣ ಪತ್ರದಲ್ಲಿ ಅಕ್ರಮವಾಗಿ ಸೇರಿಸಲಾಗಿರುವ ಅಥವಾ ಅಳಿಸಲಾಗಿರುವ ಮತದಾರರ ಹೆಸರು, ಚುನಾವಣಾ ಐಡಿ ನಂಬರ್, ಮತ್ತು ಮತದಾರರ ಪಟ್ಟಿಯ ಸೀರಿಯಲ್ ನಂಬರ್‌ನಂತಹ ವಿವರಗಳನ್ನು ಒಳಗೊಂಡಿರಬೇಕು. ಈ ಮಾಹಿತಿಯನ್ನು ಒದಗಿಸಿದರೆ ಮಾತ್ರ ಮುಂದಿನ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಇದರ ಜೊತೆಗೆ, ತಪ್ಪು ಅಥವಾ ಆಧಾರರಹಿತ ಮಾಹಿತಿಯನ್ನು ಒದಗಿಸಿದರೆ, ಸೆಕ್ಷನ್ 31 ಆರ್‌ಪಿ ಆಕ್ಟ್ 1950 ಮತ್ತು ಸೆಕ್ಷನ್ 227 ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಕಠಿಣ ಶಿಕ್ಷೆಗೆ ಗುರಿಯಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಪತ್ರದ ಜೊತೆಗೆ, ಅನ್ಬು ಕುಮಾರ್ ಅವರು ಪ್ರಮಾಣ ಪತ್ರದ ಕಾಪಿಯನ್ನು ಕಳುಹಿಸಿದ್ದಾರೆ, ಇದರಲ್ಲಿ ತಪ್ಪು ಮಾಹಿತಿ ನೀಡಿದರೆ ಶಿಕ್ಷೆಗೆ ಒಳಗಾಗುವ ಸಾಧ್ಯತೆಯ ಬಗ್ಗೆ ಉಲ್ಲೇಖಿಸಲಾಗಿದೆ. ಕಾಂಗ್ರೆಸ್ ನಿಯೋಗವು ಆಗಸ್ಟ್ 8ರಂದು ಚುನಾವಣಾಧಿಕಾರಿಗಳನ್ನು ಭೇಟಿಯಾಗಲು ಸಮಯ ಖಚಿತಪಡಿಸಿರುವುದಾಗಿ ತಿಳಿದುಬಂದಿದೆ. ಈ ಭೇಟಿಯಲ್ಲಿ ಮತದಾರರ ಪಟ್ಟಿಯ ಕುರಿತಾದ ಆರೋಪಗಳ ಬಗ್ಗೆ ಮತ್ತಷ್ಟು ಚರ್ಚೆಯಾಗುವ ಸಾಧ್ಯತೆಯಿದೆ. ಈ ಘಟನೆಯು ಕರ್ನಾಟಕದ ರಾಜಕೀಯ ವಲಯದಲ್ಲಿ ತೀವ್ರ ಗಮನ ಸೆಳೆದಿದ್ದು, ಕಾಂಗ್ರೆಸ್‌ನ ಮುಂದಿನ ಕ್ರಮವನ್ನು ಎಲ್ಲರೂ ಗಮನಿಸುತ್ತಿದ್ದಾರೆ.

HIV Infected Girl: ಡ್ರಗ್ಸ್‌ ಚಟಕ್ಕೆ ಬಿದ್ದ ಬಾಲಕಿ ಸಿಕ್ಕ ಸಿಕ್ಕವ್ರ ಜೊತೆ ಸೆಕ್ಸ್‌! ಮುಂದೆನಾಯ್ತು?

TAGGED:Election Commissioner hits back at allegations of vote riggingRahul Gandhi releases explosive document; Punishment for giving false document
Share This Article
Facebook Twitter Copy Link Print
Previous Article HIV Infected Girl: ಡ್ರಗ್ಸ್‌ ಚಟಕ್ಕೆ ಬಿದ್ದ ಬಾಲಕಿ ಸಿಕ್ಕ ಸಿಕ್ಕವ್ರ ಜೊತೆ ಸೆಕ್ಸ್‌! ಮುಂದೆನಾಯ್ತು?
Next Article Minister Kharge ಯಾರ ಮನೆಯಲ್ಲಿ ಗಂಡು‌ ಮಗು ಹುಟ್ಟಿದರೂ ಬಿಜೆಪಿಯವರು ಕ್ರೆಡಿಟ್ ಪಡೆಯಲು‌ ಮುಂದಾಗ್ತಾರೆ! ಸಚಿವ ಪ್ರಿಯಾಂಕ್ ಖರ್ಗೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?